ಮಂಗಳೂರು: ಕೊರೋನಾ ಸೋಂಕು ತಗುಲಿ, ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಕೊರೋನಾ ಹೋರಾಟದಲ್ಲಿ ತಮ್ಮ ಜೀವವನ್ನೂ ಲೆಕ್ಕಿಸದೆ ರೋಗಿಗಳ ಸೇವೆ ಮಾಡುತ್ತಿರುವ ಕೊರೋನಾ ವಾರಿಯರ್ಸ್ಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಭಾವುಕರಾದ ಕೊರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ, ಪೊಲೀಸರು ತನ್ನೊಂದಿಗೆ ಉತ್ತಮ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಇನ್ನು ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು ಹಗಲು ರಾತ್ರಿ ಎನ್ನದೆ ರೋಗಿಗಳನ್ನು ಗುಣಪಡಿಸುವ ನಿಟ್ಟಿನಲ್ಲಿ ಹೆಣಗಾಡುತ್ತಿದ್ದಾರೆ. ಅಲ್ಲದೆ ರೋಗಿಗಳಿಗೆ ಅವಶ್ಯಕವೆನಿಸಿದ ಎಲ್ಲಾ ವ್ಯವಸ್ಥೆಗಳನ್ನೂ ಅವರು ಮಾಡಿಕೊಡುತ್ತಾರೆ. ಅಂತಹವರಿಗೆ ಸಹಕಾರ ನೀಡುವ ಮೂಲಕ ಕೊರೋನಾ ಹೋರಾಟದಲ್ಲಿ ಕೈ ಜೋಡಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಈ ಕುರಿತಂತೆ ಹೇಳಿಕೆ ನೀಡಿರುವ ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿ, ವೈದ್ಯಕೀಯ ಸಿಬ್ಬಂದಿ, ಪೊಲೀಸರಿಗೆ ತಮ್ಮ ಕರ್ತವ್ಯ ನಿರ್ವಹಿಸಲು ತಡೆಯೊಡ್ಡುವಂತಹವರು ಇವರ ಮಾತುಗಳನ್ನೊಮ್ಮೆ ಕೇಳಬೇಕು ಎಂದು ಹೇಳಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಂಗಳೂರು ಕಮಿಷನರ್ ಹರ್ಷ ಅವರು, ಗುಣಮುಖರಾಗಿ ಮನೆಗೆ ತೆರಳಿದ ವ್ಯಕ್ತಿಯ ಅನುಭವಗಳನ್ನು ಕೇಳಿ. ಇದರಿಂದಲಾದರೂ ಕೊರೋನಾ ವಾರಿಯರ್ಸ್ ಜೊತೆಗೆ ಸಹಕಾರ ನೀಡುವ ಮನೋಭಾವ ಹುಟ್ಟಬಹುದು. ಅಲ್ಲದೆ ವೈದ್ಯಕೀಯ ಸಿಬ್ಬಂದಿ, ಪೊಲೀಸರ ಶ್ರಮದ ಅರಿವು ಮತ್ತು ರೋಗಿಯ ಆರೈಕೆ ಬಗ್ಗೆಯೂ ಸಂಪೂರ್ಣ ಅರಿವು ಮೂಡುವುದು ಸಾಧ್ಯ. ಹಾಗಾಗಿ ಎಲ್ಲಾ ಶಂಕಿತರೂ ಆರೋಗ್ಯ ತಪಾಸಣೆಗೆ ಮುಂದಾಗಿ ಸೋಂಕು ನಿಯಂತ್ರಣ ದಲ್ಲಿ ಕೈ ಜೋಡಿಸುವಂತೆ, ಸರ್ಕಾರದ ನಿರ್ದೇಶನಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ.
Just reproducing the experiences of a cured COVID19 patient.. please listento the first hand account about the care entire team of police officers, doctors, nurses and paramedics have given to bring any victim out of it..
Joinhands with government .@DgpKarnataka @CPBlr @DHFWKA pic.twitter.com/Hd8rzWniwZ— Harsha IPS CP Mangaluru City (@compolmlr) April 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.