ಬೆಂಗಳೂರು: ಕರ್ನಾಟಕದ ಎಲ್ಲಾ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಫಿವರ್ ಕ್ಲಿನಿಕ್ (ಜ್ವರ ತಪಾಸಣೆ) ತೆರೆಯುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಆರಂಭವಾಗುವ ಫಿವರ್ ಕ್ಲಿನಿಕ್ಗಳ ಹೊಣೆಗಾರಿಕೆಯನ್ನು ಆಯಾಯ ಜಿಲ್ಲಾಡಳಿತದ ಸುಪರ್ದಿಗೆ ವಹಿಸಲಾಗುವುದು. ಈ ಕ್ಲಿನಿಕ್ ಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಜಿಲ್ಲಾಗಳಿತಕ್ಕೆ ಸೂಚಿಸಲಾಗಿರುವುದಾಗಿಯೂ ತಿಳಿಸಿದ್ದಾರೆ.
ಇನ್ನು ಮಹಾರಾಷ್ಟ್ರದಲ್ಲಿ ಪತ್ರಕರ್ತರಿಗೂ ಕೊರೋನಾ ಸೋಂಕು ತಗುಲಿದ್ದು, 53 ಮಂದಿಗೆ ಸೋಂಕಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪತ್ರಕರ್ತರೂ ಆರೋಗ್ಯ ತಪಾಸಣೆ ಮಾಡಿಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ. ಆದ್ದರಿಂದ ರಾಜ್ಯದ ಪತ್ರಕರ್ತರೂ ಕೊರೋನಾ ತಪಾಸಣೆ ನಡೆಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.