ನವದೆಹಲಿ : ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಬಿಕ್ಕಟ್ಟಿನ ಸಂದರ್ಭದಲ್ಲಿ ಆರೋಗ್ಯ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಗಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದೆ. ಈ ಸಭೆಯಲ್ಲಿ ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಯ ಬಗ್ಗೆ ತೀವ್ರ ಕಳವಳ ವ್ಯಕ್ತವಾಗಿದೆ.
ಆರೋಗ್ಯ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದವರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಶಿಕ್ಷೆಯನ್ನು ಘೋಷಿಸಿದೆ. ಈ ಬಗ್ಗೆ ಸರ್ಕಾರ ಸುಗ್ರೀವಾಜ್ಞೆಗೆ ತರಲು ಮುಂದಾಗಿದ್ದು, ರಾಷ್ಟ್ರಪತಿ ಅವರ ಅಂಕಿತದ ನಂತರ ಜಾರಿಗೆ ಬರಲಿದೆ. ಹಿಂಸಾಚಾರದಲ್ಲಿ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಆರು ತಿಂಗಳಿಂದ ಏಳು ವರ್ಷಗಳವರೆಗೆ ಶಿಕ್ಷೆ ವಿಧಿಸಲು ಈ ಸುಗ್ರೀವಾಜ್ಞೆಯು ಅವಕಾಶ ನೀಡುತ್ತದೆ.
ಈ ಸಾಂಕ್ರಾಮಿಕ ರೋಗದಿಂದ ದೇಶವನ್ನು ಉಳಿಸಲು ಪ್ರಯತ್ನಿಸುತ್ತಿರುವ ಆರೋಗ್ಯ ಕಾರ್ಯಕರ್ತರು ದುರದೃಷ್ಟವಶಾತ್ ದಾಳಿಯನ್ನು ಎದುರಿಸುತ್ತಿದ್ದಾರೆ. ಅವರ ಮೇಲಿನ ದೌರ್ಜನ್ಯದಂತಹ ಯಾವುದೇ ಘಟನೆಯನ್ನು ಸಹಿಸುವುದಿಲ್ಲ ಎಂದು ಸಭೆಯ ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ದೌರ್ಜನ್ಯ ತಡೆಗೆ ಸುಗ್ರೀವಾಜ್ಞೆಯನ್ನು ಪರಿಚಯಿಸಲಾಗಿದೆ, ರಾಷ್ಟ್ರಪತಿಗಳ ಅನುಮೋದನೆಯ ನಂತರ ಅದನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.
ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಕ್ಕೆ ತಿದ್ದುಪಡಿ ಮಾಡುವ ಮೂಲಕ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗುವುದು ಎಂದು ಜಾವಡೇಕರ್ ಹೇಳಿದರು. ಅಂತಹ ಅಪರಾಧವು ಈಗ ಜಾಮೀನು ರಹಿತವಾಗಿರುತ್ತದೆ. 30 ದಿನಗಳಲ್ಲಿ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಆರೋಪಿಗಳಿಗೆ 3 ತಿಂಗಳಿಂದ 5 ವರ್ಷ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸಬಹುದಾಗಿದೆ.
ಗಂಭೀರ ಗಾಯಗಳಾಗಿದ್ದಲ್ಲಿ ಆರೋಪಿಗಳಿಗೆ ಆರು ತಿಂಗಳಿಂದ ಏಳು ವರ್ಷಗಳವರೆಗೆ ಶಿಕ್ಷೆ ವಿಧಿಸಬಹುದು ಎಂದು ಹೇಳಿದ್ದಾರೆ. ಅಲ್ಲದೆ, ತಪ್ಪಿತಸ್ಥರಿಗೆ 1 ಲಕ್ಷ ರೂ. ನಿಂದ 5 ಲಕ್ಷ ರೂ.ವರೆಗೆ ದಂಡ ವಿಧಿಸಬಹುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
Amendment to be made to Epidemic Diseases Act, 1897 and Ordinance will be implemented. Such crime will now be cognizable & non-bailable. Investigation will be done within 30 days. Accused can be sentenced from 3 months-5 yrs & penalised from Rs 50,000 upto Rs 2 Lakh: P Javadekar https://t.co/x3B5vjYZ8s
— ANI (@ANI) April 22, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.