ಲಕ್ನೋ: ಕೊರೋನವೈರಸ್ ಎಂಬ ಮಹಾ ಸಾಂಕ್ರಾಮಿಕ ರೋಗ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಹೀಗಾಗಿ ರಾಷ್ಟ್ರವ್ಯಾಪಿ ಲಾಕ್ ಡೌನ್ ಅನ್ನು ಘೋಷಣೆ ಮಾಡಲಾಗಿದೆ. ಜನರ ಆಚರಣೆಗಳ ಮೇಲೂ ಇದು ಪ್ರಭಾವ ಬೀರಿದೆ.
ಮುಸ್ಲಿಮರ ಪವಿತ್ರ ಮಾಸ ರಂಜಾನ್ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಟು ಎಚ್ಚರಿಕೆಯನ್ನೂ ರವಾನಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, ರಂಜಾನ್ ವೇಳೆ ಯಾರೊಬ್ಬರು ಗುಂಪು ಸೇರಬಾರದು ಎಂಬ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಇಫ್ತಾರ್ ಕೂಟಗಳನ್ನು ನಡೆಸಬಾರದು, ಸಹರಿ ನಡೆಸಬಾರದು, ಮಸೀದಿ ಮುಂತಾದ ಕಡೆ ಗುಂಪುಗಳನ್ನು ಸೇರುವಂತಿಲ್ಲ ಎಂದು ಯೋಗಿ ಸ್ಪಷ್ಟ ಎಚ್ಚರಿಕೆಯನ್ನು ರವಾನಿಸಿದ್ದಾರೆ.
ಅಧಿಕಾರಿಗಳೊಂದಿಗೆ ಲಾಕ್ ಡೌನ್ ಪರಿಸ್ಥಿತಿಯನ್ನು ಅವಲೋಕನ ಮಾಡಿದ ಯೋಗಿ ಮತ್ತು ಅವರ ಆಡಳಿತ, ಇನ್ನೂ ಹಲವು ದಿವಸಗಳ ಕಾಲ ಜನರ ಒಟ್ಟು ಸೇರುವಿಕೆ ತಡೆಯುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.
ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ರಸ್ತೆ ಸೋಂಕು ಹರಡುವಿಕೆಯ ಪ್ರಮಾಣವನ್ನು ಕುಗ್ಗಿಸಬಹುದಾಗಿದೆ.ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಜನರ ಸೇವೆಗೆ ಅವಕಾಶ ನೀಡದಿರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚರಿಕೆ ವಹಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.