ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಭದ್ರತಾಪಡೆಗಳು ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ.
ಹತ್ಯೆಯಾದ ಉಗ್ರರಿಂದ ಸಾಕಷ್ಟು ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಗ್ರರು ಅವಿತುಕೊಂಡಿರುವ ಬಗ್ಗೆ ಸ್ಪಷ್ಟ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ, ಭಾರತೀಯ ಸೇನೆಯ 50 ರಾಷ್ಟ್ರೀಯ ರೈಫಲ್ಸ್ (ಕುಮಾನ್ ರೆಜಿಮೆಂಟ್), 130 ಬೆಟಾಲಿಯನ್ ಆಫ್ ಸಿಆರ್ಪಿಎಫ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಆವಂತಿಪುರದ ಗೌರಿಪುರ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದರು.
ಶೋಧ ಕಾರ್ಯಾಚರಣೆಯ ಬಳಿಕ ಎನ್ಕೌಂಟರ್ ಆಗಿ ಬದಲಾಗಿದ್ದು, ಹಲವು ಹೊತ್ತಿನವರೆಗೆ ಸೇನಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಬಳಿಕ ಯೋಧರ ಗುಂಡೇಟಿಗೆ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಮೃತಪಟ್ಟ ಉಗ್ರರು ಯಾವ ಉಗ್ರ ಸಂಘಟನೆಗೆ ಸೇರಿದವರು ಎಂಬ ಬಗ್ಗೆ ಇದುವರೆಗೆ ಸ್ಪಷ್ಟ ಮಾಹಿತಿ ದೊರಕಿಲ್ಲ.
ಪಾಕಿಸ್ತಾನವು ಭಾರತದಲ್ಲಿ ಅಸ್ಥಿರತೆಯನ್ನು ಸೃಷ್ಟಿ ಮಾಡುವ ಸಲುವಾಗಿ ದುಷ್ಕೃತ್ಯಗಳನ್ನು ಎಸಗಲು ಉಗ್ರರಿಗೆ ಕುಮ್ಮಕ್ಕು ನೀಡುತ್ತಲೇ ಬಂದಿದೆ. ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಪಾಕಿಸ್ತಾನದ ನೀಚ ಕೃತ್ಯ ಮುಂದುವರೆಯುತ್ತಲೇ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.