ಬೆಂಗಳೂರು: ಕೊರೋನಾ ಸಂಕಷ್ಟದ ತುರ್ತು ಸಂದರ್ಭದಲ್ಲಿ ನಿಯಂತ್ರಣ ನಿಯಮಗಳನ್ನು ಪಾಲಿಸುವ ಮೂಲಕ ಜನರಿಗೆ ಮಾದರಿಯಾಗಬೇಕು ಎಂದು ಮುಖ್ಯಮಂತ್ರಿ ಬಿಎಸ್ವೈ ಅವರು ತಮ್ಮ ಸಚಿವ ಸಂಪುಟದ ಸದಸ್ಯರಿಗೆ ಸೂಚನೆ ನೀಡಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಜನರಿಗೆ ಮಾದರಿಗಳಾಗಿ ಎಂದು ತಿಳಿಸಿದ್ದಾರೆ.
ಕೊರೋನಾ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಕೋವಿಡ್-19 ಇಂದ ರಕ್ಷಿಸಿಕೊಳ್ಳಲು ಮತ್ತು ಹರಡದಂತೆ ತಡೆಯಲು ಇರುವ ಏಕೈಕ ಮಾರ್ಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು. ಆದ್ದರಿಂದ ಸಚಿವರು, ಸಂಸದರು, ಶಾಸಕರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಕಡ್ಡಾಯ ವ್ಯಕ್ತಿಗತ ಅಂತರ ಕಾಪಾಡುವ ಮೂಲಕ ಜನರಿಗೆ ಮಾದರಿಯಾಗೋಣ ಎಂಬುದಾಗಿ ಸಿಎಂ ಸೂಚಿಸಿದ್ದಾರೆ.
ಇತ್ತೀಚೆಗೆ ರಾಜಕೀಯ ನಾಯಕರು ನಿಯಂತ್ರಣ ನಿಯಮಗಳನ್ನು ಅನುಸರಿಸದೆ ಮಾಡಿದ ಸಭೆ, ಕೆಲವು ಪಕ್ಷದ ನಾಯಕರು ನಡೆಸಿದ ದಾಂಧಲೆ, ಪುಂಡಾಟಿಕೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಈ ಸಲಹೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಕೋವಿಡ್19 ಸೋಂಕಿನಿಂದ ರಕ್ಷಿಸಿಕೊಳ್ಳಲು ಮತ್ತು ಇತರರಿಗೆ ಹರಡುವುದನ್ನು ತಡೆಗಟ್ಟಲು, ಎಲ್ಲರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದೇ ಏಕೈಕ ಮಾರ್ಗ.
ಹಾಗಾಗಿ, ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿ ವರ್ಗದವರು ಕಡ್ಡಾಯವಾಗಿ ಈ ನಿಯಮವನ್ನು ಅನುಸರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು.
ಕಡ್ಡಾಯವಾಗಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳೋಣ.
— CM of Karnataka (@CMofKarnataka) April 26, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.