ಮುಜಾಫರ್ಪುರ್: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಜನಾಂಗೀಯ ಹೇಳಿಕೆ ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬಿಹಾರ ನ್ಯಾಯಾಲಯ ಗುರುವಾರ ಪೊಲೀಸರಿಗೆ ಆದೇಶಿಸಿದೆ.
ಕಾಂಗ್ರೆಸ್ ಕಾರ್ಯಕರ್ತ ಸಂಜಯ್ ಕುಮಾರ್ ಸಿಂಗ್ ಎಂಬುವವರು ಚೀಫ್ ಜ್ಯೂಡಿಶಿಯಲ್ ಮ್ಯಾಜಿಸ್ಟ್ರೇಟ್ ವೇದ್ ಪ್ರಕಾಶ್ ಸಿಂಗ್ ಅವರಿಗೆ ದೂರು ನೀಡಿದ್ದರು, ಅವರು ಪ್ರಕರಣವನ್ನು ಕೋರ್ಟ್ ಆಫ್ ಸಬ್ ಡಿವಿಷನಲ್ ಜ್ಯೂಡಿಶಿಯಲ್ ಮ್ಯಾಜಿಸ್ಟ್ರೇಟ್ ಅಂಜು ಸಿಂಗ್ ಅವರಿಗೆ ವರ್ಗಾವಣೆ ಮಾಡಿದ್ದಾರೆ.
ಇದೀಗ ಅಂಜು ಸಿಂಗ್ ಅವರು ಗಿರಿರಾಜ್ ವಿರುದ್ಧ ಐಪಿಸಿ ಸೆಕ್ಷನ್ 166 ಅಡಿಯಲ್ಲಿ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಇದು ಕೇಂದ್ರ ಸಚಿವರಾಗಿರುವ ಗಿರಿರಾಜ್ ಅವರಿಗೆ ಕಂಟಕವಾಗಿ ಪರಿಣಮಿಸಲಿದೆ.
‘ಸೋನಿಯಾ ಗಾಂಧಿ ಬಿಳಿಯಾಗಿರುವುದರಿಂದ ಅವರಿಗೆ ಕಾಂಗ್ರೆಸ್ನಲ್ಲಿ ಉನ್ನತ ಸ್ಥಾನ ಲಭಿಸಿತು. ಒಂದು ವೇಳೆ ರಾಜೀವ್ ಗಾಂಧಿ ನೈಜೀರಿಯಾದವಳನ್ನು ಮದುವೆಯಾಗಿದ್ದರೆ ಕಾಂಗ್ರೆಸ್ ಅವರನ್ನು ಹತ್ತಿರಕ್ಕೂ ಸೇರಿಸುತ್ತಿರಲಿಲ್ಲ’ ಎಂದಿದ್ದರು. ಅವರ ಈ ಹೇಳಿಕೆಗೆ ದೇಶಾದಾದ್ಯಂತ ಭಾರೀ ಖಂಡನೆ ವ್ಯಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.