ಬೆಂಗಳೂರು: ಬೇಸಿಗೆಯಲ್ಲಿ ಜನರ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಂತರ್ಜಲ ವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ‘ಅಂತರ್ಜಲ ಚೇತನ’ ಎಂಬ ಹೊಸ ಯೋಜನೆಯೊಂದನ್ನು ಆರಂಭಿಸಲು ಮುಂದಾಗಿದೆ.
ಗ್ರಿಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನರೇಗಾ ಯೋಜನೆಯ ಮೂಲಕ ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಒಂಬತ್ತು ಜಿಲ್ಲಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ ಎಂದು ಸಚಿವ ಈಶ್ವರಪ್ಪ ಮಾಹಿತಿ ನೀಡಿದ್ದಾರೆ. ಕೋಲಾರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಚಾರವನ್ನು ಅವರು ತಿಳಿಸಿದ್ದಾರೆ.
ಮೇ 5 ರಂದು ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುತ್ತಿದ್ದು, ಈ ಸಂಬಂಧ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆಗೆ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ. ಆಯ್ಕೆಯಾ ಜಿಲ್ಲೆಗಳ ಪ್ರತಿ ಗ್ರಾಮಗಳಲ್ಲಿಯೂ ಅಂತರ್ಜಲ ಅಭಿವೃದ್ಧಿಗೆ ಪೂರಕವಾಗುವಂತೆ ಹೆಚ್ಚು ಇಂಗು ಗುಂಡಿಗಳನ್ನು ನಿರ್ಮಿಸುವುದಕ್ಕೂ ಪ್ರಾಶಸ್ತ್ಯ ನೀಡಲಾಗುತ್ತದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಇನ್ನು ಕೋಲಾರದಲ್ಲಿ 46 ಕೋಟಿ ರೂ. ಗಳ ಬೋರ್ವೆಲ್ ಕೊರೆಸಲಾಗಿದ್ದು, ಬಾಕಿ ಹಣವನ್ನು ಶೀಘ್ರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಗಳಿಗೆ ತಿಳಿಸುವುದಾಗಿಯೂ ಈಶ್ವರಪ್ಪ ಹೇಳಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಈ ಸಂದರ್ಭ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.