ಮಂಗಳೂರು: ಕೊರೋನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯನ್ನೂ ಬಿಟ್ಟೂ ಬಿಡದಂತೆ ಕಾಡುತ್ತಿದೆ. ಈ ಸಂದರ್ಭದಲ್ಲಿ ಮೀನುಗಾರಿಕೆಯನ್ನೂ ಆರಂಭ ಮಾಡಲಾಗಿದ್ದು, ಮೀನುಗಾರಿಕಾ ಬಂದರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸಾಮಾಜಿಕ ಅಂತರ ಕಾಪಾಡಲು ಕಷ್ಟವಾಗುತ್ತಿದ್ದು, ಅಂತರಾಜ್ಯ ಮೀನುಗಾರಿಕಾ ವಾಹನಗಳಿಗೆ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜನಸಂಖ್ಯೆ ಹೆಚ್ಚಾದಂತೆ ಕೊರೋನಾ ನಿಯಂತ್ರಣ ಕ್ರಮಗಳನ್ನು ಸರಿಯಾಗಿ ನಿರ್ವಹಿಸಲು ಕಷ್ಟವಾಗುತ್ತದೆ. ಕಳೆದ ನಾಲ್ಕು ದಿನಗಳಿಂದ ಮೀನುಗಾರಿಕೆ ನಿರ್ಬಂಧ ಸಡಿಲಿಸಲಾಗಿದ್ದು, ಮೀನು ಸಾಗಾಟದ ಟ್ರಕ್ ಸಂಚಾರ ಆರಂಭವಾಗಿದೆ. ಅಲ್ಲದೆ ಬಂದರಿನಲ್ಲಿ ಕಾರ್ಮಿಕ ವರ್ಗ ಮತ್ತು ವ್ಯಾಪಾರಿಗಳ ಸಂಖ್ಯೆಯೂ ಹೆಚ್ಚುತ್ತಿದ್ದು ಸೋಂಕಿನ ಭೀತಿ ಇದೆ. ಆದ್ದರಿಂದ ಅಂತರಾಜ್ಯ ಮೀನುಗಾರಿಕಾ ವಾಹನಗಳನ್ನು ನಿಷೇಧಿಸಲು ಪೂಜಾರಿ ಸೂಚಿಸಿದ್ದಾರೆ.
ನಿಯಂತ್ರಣ ನಿಯಮಗಳನ್ನು ಅನುಸರಿಸಲು ಕಡ್ಡಾಯ ಪಾಲನೆಗೆ ತಿಳಿಸಿದ್ದರೂ, ಜನರು ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸದೆ ಕಾರ್ಯ ನಿರ್ವಹಿಸುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಪೂಜಾರಿ ಮುಂದಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.