ನವದೆಹಲಿ: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಗ್ರಾಹಕರ ಸಮಸ್ಯೆಗಳನ್ನು ಆಲಿಸಲು ರೈಲ್ವೆ ಇಲಾಖೆ ಆರಂಭಿಸಿದ್ದ ಸಹಾಯವಾಣಿ ಪ್ರತಿನಿತ್ಯ 13,000 ಕರೆಗಳನ್ನು ಸ್ವೀಕರಿಸಲಾಗುತ್ತಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಸಾರ್ವಜನಿಕರು ಈ ವರೆಗೆ ಅನೇಕ ಸಂದರ್ಭಗಳಲ್ಲಿ ಕರೆ ಮಾಡಿದ್ದು, ಸಮಸ್ಯೆ, ಪ್ರಶ್ನೆ ಮತ್ತು ಸಲಹೆ ಸೂಚನೆಗಳನ್ನು ಇಲಾಖೆಯ ಸಹಾಯವಾಣಿಯ ಮೂಲಕ ಹಂಚಿಕೊಂಡಿದ್ದಾರೆ ಎಂದು ಇಲಾಖೆಯ ಅಧಿಕೃತ ಮೂಲ ಮಾಹಿತಿ ನೀಡಿದೆ. ಈ ಸಹಾಯವಾಣಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನೊಳಗೊಂಡಂತೆ 400 ಮಂದಿ ಕಾರ್ಯ ನಿರ್ವಹಿಸುತ್ತಿದ್ದು, ಜನರಿಗೆ ಸ್ಥಳೀಯ ಭಾಷೆಗಳಲ್ಲಿಯೂ ಸೇವೆ ಒದಗಿಸಲಾಗುತ್ತಿದೆ.
ಸಹಾಯವಾಣಿ ಸಂಖ್ಯೆಗಳಾದ 139, 138 ಮತ್ತು ಟ್ವಿಟ್ಟರ್ railmadad@rb.railnet.gov.in ಅನ್ನು ಬಳಸಿ ಜನರು ಈ ಸಹಾಯವಾಣಿ ಸಂಪರ್ಕಿಸುತ್ತಿದ್ದಾರೆ. ಈವರೆಗೆ 139 ಸಂಖ್ಯೆಗೆ ಸುಮಾರು 2,30,000 ಕರೆಗಳು ಬಂದಿವೆ. ಜೊತೆಗೆ 138 ಕ್ಕೆ 1,10,000 ಕರೆಗಳು ಬಂದಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ದಿನದ 24 ಗಂಟೆಯೂ ಈ ಸಹಾಯವಾಣಿ ಲಭ್ಯವಿದ್ದು, ಜನರಿಗೆ ಅನುಕೂಲವಾಗುವ ಭಾಷೆಗಳಲ್ಲಿ ಮಾಹಿತಿ ನೀಡಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಮತ್ತಷ್ಟು ಹೊಸಾ ಕ್ರಮಗಳನ್ನು ಅನುಸರಿಸುವ ಮೂಲಕ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲಾಗುವುದು ಎಂದೂ ಇಲಾಖೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.