ನವದೆಹಲಿ: ಮಂಗಳವಾರ ತಡರಾತ್ರಿ ಮಾಡಿದ ಸರಣಿ ಟ್ವೀಟ್ಗಳಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ “ಉದ್ದೇಶಪೂರ್ವಕ ಡೀಫಾಲ್ಟರ್ಗಳು, ಕೆಟ್ಟ ಸಾಲಗಳು ಮತ್ತು write-offs” ಆರೋಪಗಳನ್ನು ಬಲವಾಗಿ ಖಂಡಿಸಿದ್ದಾರೆ.
ರಾಹುಲ್ ಆರೋಪಗಳನ್ನು, “ಜನರನ್ನು ಲಜ್ಜೆಗೆಟ್ಟ ರೀತಿಯಲ್ಲಿ ದಾರಿ ತಪ್ಪಿಸುವ ಪ್ರಯತ್ನ ಮತ್ತು ಸತ್ಯಗಳನ್ನು ಸೆನ್ಸೇಷನಲ್ಗೊಳಿಸುವ ಪ್ರಯತ್ನ” ಎಂದಿದ್ದಾರೆ.
“ರಾಹುಲ್ ಗಾಂಧಿ ಅವರು write offs ಅಂದರೆ ಏನು ಎಂಬ ಬಗ್ಗೆ ಡಾ.ಮನಮೋಹನ್ ಸಿಂಗ್ ಅವರೊಂದಿಗೆ ಸಮಾಲೋಚಿಸಬೇಕಿತ್ತು” ಎಂದು ಸೀತಾರಾಮನ್ ಅವರು ರಾತ್ರಿ 11 ರ ಸುಮಾರಿಗೆ ಮಾಡಿದೆ ಸರಣಿ ಟ್ವೀಟ್ಗಳಲ್ಲಿ ಹೇಳಿದ್ದಾರೆ.
“ಸಂಸದ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಘ್ ಸುರ್ಜೇವಾಲ ಅವರು ಅತ್ಯಂತ ಕೆಟ್ಟ ರೀತಿಯಲ್ಲಿ ಜನರನ್ನು ದಾರಿತಪ್ಪಿಸುವ ಕೃತ್ಯವನ್ನು ನಡೆಸಿದ್ದಾರೆ” ಎಂದು ಸೀತಾರಾಮನ್ ಆರೋಪಿಸಿದ್ದಾರೆ. ಅಲ್ಲದೆ, ವಿಷಯವನ್ನು ದಾರಿ ತಪ್ಪಿಸುವ ಮೂಲಕ ಸತ್ಯವನ್ನು ಸೆನ್ಸೇಷನಲ್ಗೊಳಿಸುವುದು ಕಾಂಗ್ರೆಸ್ ಪಕ್ಷದ ಅಭ್ಯಾಸ ಎಂದು ಅವರು ಹೇಳಿದ್ದಾರೆ.
Mehul Choksi Case : Attachments of Rs 1936.95 Crore including foreign attachment of Rs 67.9 Crore. Seizure of Rs 597.75 Crore. Red Notice issued. Extradition Request sent to Antigua. Hearing for declaration of Mehul Choksi as Fugitive Offender is in progress.
— Nirmala Sitharaman (@nsitharaman) April 28, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.