ನವದೆಹಲಿ: ಬಾಲಿವುಡ್ ಚಿತ್ರರಂಗದ ದಿಗ್ಗಜ ನಟ ರಿಷಿ ಕಪೂರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಬಹುಮುಖ ವ್ಯಕ್ತಿತ್ವ, ಸದಾ ಹಸನ್ಮುಖಿ ಆಗಿದ್ದರು ರಿಷಿ ಕಪೂರ್. ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ ಸಂವಹನವನ್ನು ನಾನು ಸದಾ ನೆನಪಿಸಿಕೊಳ್ಳುತ್ತೇನೆ. ಸಿನಿಮಾ ಮತ್ತು ಭಾರತದ ಪ್ರಗತಿಯ ಬಗ್ಗೆ ಅವರು ಹೆಚ್ಚು ಆಸಕ್ತಿ ಹೊಂದಿದ್ದರು. ಅವರ ಅಗಲುವಿಕೆ ನೋವು ತಂದಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನಮ್ಮ ಸಂತಾಪ. ಓಂ ಶಾಂತಿ” ಎಂದಿದ್ದಾರೆ.
Multifaceted, endearing and lively…this was Rishi Kapoor Ji. He was a powerhouse of talent. I will always recall our interactions, even on social media. He was passionate about films and India’s progress. Anguished by his demise. Condolences to his family and fans. Om Shanti.
— Narendra Modi (@narendramodi) April 30, 2020
67 ವರ್ಷದ ರಿಷಿ ಕಪೂರ್ ಅವರು ಎರಡು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಪೀಡಿತರಾಗಿದ್ದರು. ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ತಿಂಗಳ ಹಿಂದಷ್ಟೇ ಅವರು ಭಾರತಕ್ಕೆ ಆಗಮಿಸಿದ್ದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ರಿಷಿ ಕಪೂರ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. “ಸಿನಿಮಾ ನಟ ರಿಷಿ ಕಪೂರ್ ಅವರ ಅಗಲುವಿಕೆಯಿಂದ ನೋವಾಗಿದೆ. ತನ್ನ ವಿಭಿನ್ನ ಶೈಲಿ ಮತ್ತು ಪ್ರದರ್ಶನಗಳಿಂದ ಅವರು ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುತ್ತಾರೆ. ಅವರು ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಈ ಸಂದರ್ಭದಲ್ಲಿ ನಮ್ಮ ಪ್ರಾರ್ಥನೆ ಇರುತ್ತದೆ” ಎಂದಿದ್ದಾರೆ.
ಗಣ್ಯರು, ಚಿತ್ರರಂಗದ ಕಲಾವಿದರು, ಕ್ರೀಡಾ ತಾರೆಯರು, ದಿಗ್ಗಜರು ಸೇರಿದಂತೆ ರಿಷಿ ಕಪೂರ್ ಅಭಿಮಾನಿಗಳು ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.