ಚೆನ್ನೈ: ಜುಲೈ 23ರಂದು ತಮಿಳುನಾಡಿನ ತಿರುಚಿರಪಳ್ಳಿಗೆ ಆಗಮಿಸುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಸರಿಯಾದ ಭದ್ರತಾ ವ್ಯವಸ್ಥೆಯನ್ನು ಒದಗಿಸಬೇಕೆಂದು ಮದ್ರಾಸ್ ಹೈಕೋರ್ಟ್ ಅಲ್ಲಿನ ಸರ್ಕಾರ ಸೂಚನೆ ನೀಡಿದೆ.
ರಾಹುಲ್ ಝಡ್ ಕೆಟಗರಿ ಭದ್ರತೆಯನ್ನು ಹೊಂದಿದ್ದರೂ, ಅವರು ರಾಜ್ಯಕ್ಕೆ ಆಗಮಿಸುವ ವೇಳೆ ಬಾಹ್ಯವಾಗಿ ವಿಶೇಷ ಭದ್ರತೆಯನ್ನು ಒದಗಿಸಬೇಕು. ಅವರ ಭದ್ರತೆಯಲ್ಲಿ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಬೇಕು ಎಂದು ನ್ಯಾಯಮೂರ್ತಿ ಎಂ.ಸತ್ಯನಾರಾಯಣನ್ ತಿಳಿಸಿದ್ದಾರೆ.
ವಕೀಲ ಎಪಿ ಸೂರ್ಯಪ್ರಕಾಶಮ್ ಎಂಬುವವರು ರಾಹುಲ್ ಅವರ ಭದ್ರತೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಈ ಸೂಚನೆಯನ್ನು ಹೊರಡಿಸಿದೆ.
ಕಾಂಗ್ರೆಸ್ ನಾಯಕ ಕೆ.ಕಾಮರಾಜ್ ಅವರ ಹುಟ್ಟು ಹಬ್ಬ ಆಚರಿಸಲು, ರೈತರೊಂದಿಗೆ ಚರ್ಚೆ ನಡೆಸುವ ಸಲುವಾಗಿ ಇಂದು ರಾಹುಲ್ ತಮಿಳುನಾಡಿಗೆ ತೆರಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.