ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿಯಾಗಿ ಹೇರಲಾಗಿರುವ ಲಾಕ್ ಡೌನ್ ಅನ್ನು ಮತ್ತೆ ಎರಡು ವಾರಗಳ ಕಾಲ ವಿಸ್ತರಿಸಲು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಆದೇಶ ಹೊರಡಿಸಿದೆ.
ಪ್ರಸ್ತುತ ಭಾರತದಲ್ಲಿ 35365 ಕೊರೋನವೈರಸ್ ಪ್ರಕರಣಗಳಿವೆ. 1152 ಸಾವುಗಳು ಸಂಭವಿಸಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
Ministry of Home Affairs issues order under the Disaster Management Act, 2005 to further extend the Lockdown for a further period of two weeks beyond May 4: MHA pic.twitter.com/Cw4bkdMTFU
— ANI (@ANI) May 1, 2020
3ನೇ ಹಂತದ ಲಾಕ್ಡೌನ್ ವೇಳೆ ಸರಕಾರ ವಿವಿಧ ಚಟುವಟಿಕೆಗಳ ಬಗ್ಗೆ ಹೊಸ ನಿರ್ದೇಶನಗಳನ್ನು ಹೊರಡಿಸಿದೆ. ಜಿಲ್ಲೆಗಳ ಅಪಾಯದ ಮಟ್ಟಕ್ಕೆ ಅನುಗುಣವಾಗಿ ನಿರ್ದೇಶನ ಇದೆ. ರೆಡ್ ಝೋನ್, ಗ್ರೀನ್ ಝೋನ್, ಆರೇಂಜ್ ಝೋನ್‌ಗಳಲ್ಲಿ ಬೇರೆಬೇರೆ ನಿರ್ದೇಶನಗಳನ್ನು ನೀಡಲಾಗಿದೆ.
ಗ್ರೀನ್ ಝೋನ್ ಮತ್ತು ಆರೇಂಜ್ ಝೋನ್ ಜಿಲ್ಲೆಗಳಲ್ಲಿ ಹಲವಾರು ವಿನಾಯಿತಿಗಳನ್ನು ನೀಡಲಾಗಿದೆ.
“ಸಮಗ್ರ ಪರಿಶೀಲನೆ ಬಳಿಕ ಕೊರೋನವೈರಸ್ ಪರಿಸ್ಥಿತಿಗಳನ್ನು ಅವಲೋಕಿಸಿ ಕೇಂದ್ರ ಗೃಹ ಸಚಿವಾಲಯವು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ” ಎಂದು ಗೃಹ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.