ಬೆಂಗಳೂರು: ಕೊರೋನಾ ಸಂಕಷ್ಟದಿಂದ ಪಾರಾಗಲು ಮುಂದಿನ ಒಂದು ವರ್ಷಗಳ ಕಾಲ ಜನರು ಸಾರ್ವಜನಿಕ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಬಳಕೆ ಮಾಡಬೇಕು, ತಪ್ಪಿದಲ್ಲಿ ದಂಡ ಪಾವತಿಸಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ನಗರ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ.
ಬೆಂಗಳೂರಿನಲ್ಲಿ ಮಾಸ್ಕ್ ಇಲ್ಲದೆ ರಸ್ತೆಗಿಳಿದರೆ ಮೊದಲನೇ ಬಾರಿ 1000 ರೂ. ದಂಡ, ಪ್ರತಿ ಬಾರಿ ಈ ತಪ್ಪನ್ನು ಪುನರಾವರ್ತಿಸಿದರೆ 2000 ರೂ. ಗಳ ದಂಡ ಪಾವತಿಸಬೇಕಾಗುವುದಾಗಿ ಬಿಬಿಎಂಪಿ ಈಗಾಗಲೇ ಆದೇಶ ಹೊರಡಿಸಿದೆ.
ಬೆಂಗಳೂರನ್ನು ಹೊರತುಪಡಿಸಿ ಇತರೆಡೆಗಳಲ್ಲಿ ಅಂದರೆ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಾಸ್ಕ್ ಇರದೆ ರಸ್ತೆಗಿಳಿದರೆ, ನಿಯಮ ಉಲ್ಲಂಘಿಸಿದ ವ್ಯಕ್ತಿ 200 ರೂ., ಇತರೆಡೆಗಳಲ್ಲಿ 100 ರೂ. ದಂಡ ಪಾವತಿ ಮಾಡುವಂತೆ ಆದೇಶ ಹೊರಡಿಸಲಾಗಿದೆ. ಈ ಆದೇಶವನ್ನು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ್ ಅಖ್ತರ್ ಅವರು ಹೊರಡಿಸಿದ್ದಾರೆ. ಅಲ್ಲದೆ ಈ ಆದೇಶ ಮುಂದಿನ ಒಂದು ವರ್ಷಗಳ ಕಾಲ ಅಥವಾ ಈ ಆದೇಶವನ್ನು ಸರ್ಕಾರ ಹಿಂಪಡೆಯುವವರೆಗೆ ಜಾರಿಯಲ್ಲಿರಲಿದೆ ಎಂದು ಸರ್ಕಾರ ಸ್ಪಷ್ಟ ಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.