ನವದೆಹಲಿ: ಕೊರೋನಾ ಸೋಂಕು ಹರಡದಂತೆ ಎಚ್ಚರ ವಹಿಸಲು ಶಿಕ್ಷಣ ಸಂಸ್ಥೆಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.
ಶೈಕ್ಷಣಿಕ ಸಂಸ್ಥೆಗಳು ಆರಂಭವಾದ ಕೂಡಲೇ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ವಿದ್ಯಾರ್ಥಿಗಳು ಕುಳಿತುಕೊಳ್ಳುವುದಕ್ಕೆ ಪೂರಕವಾದ ಹೊಸ ಕ್ರಮಗಳನ್ನು ಅನುಸರಿಸುವುದು, ಪರಿಷ್ಕೃತ ಹಾಸ್ಟೆಲ್, ಮೆಸ್, ಗ್ರಂಥಾಲಯ ವ್ಯವಸ್ಥೆಗಳನ್ನು ರೂಪಿಸುವಂತೆ ತಿಳಿಸಿದೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕ್ಯಾಂಟೀನ್ಗಳಲ್ಲಿಯೂ ವ್ಯವಸ್ಥೆ ರೂಪಿಸುವುದನ್ನು ಕಡ್ಡಾಯಗೊಳಿಸಿದೆ.
ಶೈಕ್ಷಣಿಕ ಸಂಸ್ಥೆಗಳನ್ನು ಮತ್ತೆ ಆರಂಭಿಸುವ ಸಂದರ್ಭದಲ್ಲಿ ಈ ಮಾರ್ಗಸೂಚಿಗಳನ್ನು ಶಿಕ್ಷಣ ಸಂಸ್ಥೆಗಳಿಗೆ ತಲುಪಿಸಲಾಗುತ್ತದೆ. ಅದರನ್ವಯ ಆಡಳಿತ ಮಂಡಳಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಿಕೊಂಡು ವಿದ್ಯಾರ್ಥಿಗಳಿಗೆ ಪೂರಕವಾದಂತೆ ವ್ಯವಸ್ಥೆಗಳನ್ನು ರೂಪಿಸಬೇಕು ಎಂದು ಎಂಎಚ್ಆರ್ಡಿ ಮಾಹಿತಿ ನೀಡಿದೆ.
ಅಲ್ಲದೆ ಸಂದರ್ಶಕರ ವಿಚಾರದಲ್ಲಿಯೂ ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಸೂಚಿಸಲಾಗಿದೆ. ವಸತಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಕೊರೋನಾ ವೈರಾಣು ಹರಡದಂತೆ ಸಾಮಾಜಿಕ ಅಂತರ ಕಾಪಿಟ್ಟುಕೊಳ್ಳುವ ಬಗೆಗೂ ಎಮನ ಹರಿಸಬೇಕು ಎಂದು ಸಚಿವಾಲಯ ತಿಳಿಸಿದೆ. ಜೊತೆಗೆ ತರಗತಿಗಳನ್ನು ಪಾಳಿಗಳಲ್ಲಿ ನಡೆಸುವುದು, ಪ್ರಯೋಗಾಲಯಗಳಲ್ಲಿಯೂ ಹೆಚ್ಚಿನ ಆರೋಗ್ಯ ಭದ್ರತಾ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಶಿಕ್ಷಣ ಇಲಾಖೆಗಳು ಕಾರ್ಯ ನಿರ್ವಹಿಸುವಂತೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.