ನವದೆಹಲಿ: ಪಾಕಿಸ್ಥಾನವು ಜಮ್ಮು-ಕಾಶ್ಮೀರದಲ್ಲಿ ವಶಪಡಿಸಿಕೊಂಡಿರುವ ಪ್ರದೇಶಗಳನ್ನು ತಕ್ಷಣವೇ ತೆರವುಗೊಳಿಸಬೇಕು ಎಂದು ಭಾರತವು ಸೂಚನೆಯನ್ನು ನೀಡಿದೆ.
ಪಾಕಿಸ್ಥಾನದ ಸುಪ್ರೀಂಕೋರ್ಟ್ ಗಿಲ್ಗಿಟ್ ಬಾಲ್ಟಿಸ್ತಾನದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದೆ. ಭಾರತವು ಈ ಆದೇಶಕ್ಕೆ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ.
ಪಾಕಿಸ್ಥಾನ ಅತಿಕ್ರಮಿಸಿಕೊಂಡಿರುವ ಪ್ರದೇಶದಲ್ಲಿ ಯಾವುದೇ ಬದಲಾವಣೆಗೆ ಭಾರತದ ತೀವ್ರ ಆಕ್ಷೇಪ ಇದೆ ಎಂದು ಭಾರತ ಪಾಕಿಸ್ಥಾನಕ್ಕೆ ಸ್ಪಷ್ಟವಾಗಿ ತಿಳಿಸಿದೆ. ತಕ್ಷಣವೇ ಅತಿಕ್ರಮಿತ ಪ್ರದೇಶಗಳಿಂದ ವಾಪಸ್ ತೆರಳುವಂತೆ ಸೂಚನೆಯನ್ನು ನೀಡಿದೆ.
ಗಿಲ್ಗಿಟ್-ಬಾಲ್ಟಿಸ್ತಾನ್ ಸೇರಿದಂತೆ ಇಡೀ ಜಮ್ಮು-ಕಾಶ್ಮೀರ ಮತ್ತು ಭಾರತದ ಅವಿಭಾಜ್ಯ ಅಂಗ ಎಂಬುದನ್ನು ಭಾರತದ ವಿದೇಶಾಂಗ ಸಚಿವಾಲಯವು ಪುನರುಚ್ಚರಿಸಿದೆ.
“ಪಾಕಿಸ್ಥಾನದ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಬಗ್ಗೆ ಪಾಕಿಸ್ಥಾನದ ಹಿರಿಯ ರಾಜತಾಂತ್ರಿಕರ ಬಳಿ ಆಕ್ಷೇಪವನ್ನು ವ್ಯಕ್ತಪಡಿಸಲಾಗಿದೆ” ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶಗಳನ್ನು ಪಾಕಿಸ್ಥಾನ ಅತಿಕ್ರಮಣ ಮಾಡಿಕೊಂಡಿರುವುದಾಗಿದೆ. ಹೀಗಾಗಿ ಈ ಪ್ರದೇಶಗಳ ಮೇಲೆ ಪಾಕಿಸ್ಥಾನಕ್ಕೇ ಆಗಲಿ ಅಥವಾ ಅಲ್ಲಿನ ಸುಪ್ರೀಂಕೋರ್ಟ್ಗಾಗಲಿ ಯಾವುದೇ ಹಕ್ಕಿಲ್ಲ ಎಂದು ಭಾರತ ಪ್ರತಿಪಾದಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.