ಶ್ರಿನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಪ್ರದೇಶದಲ್ಲಿ ಹಿಜ್ಬುಲ್ ಮಜಾಹಿದ್ದೀನ್ ಭಯೋತ್ಪಾದನಾ ಸಂಘಟನೆಯ ಸದಸ್ಯನನ್ನು ಭಾರತೀಯ ಸೇನಾಪಡೆ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಉಗ್ರಗಾಮಿ ಸಂಘಟನೆಯ ಓವರ್ ಗ್ರೌಂಡ್ ವರ್ಕರ್ ಆಗಿದ್ದು, ಉಗ್ರರಿಗೆ ಭದ್ರತಾ ಪಡೆಗಳ ಮಾಹಿತಿಗಳನ್ನು ರವಾನಿಸುವ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಭಯೋತ್ಪಾದಕ ದಾಳಿಗೆ ಪೂರಕವಾಗಿ ವ್ಯವಸ್ಥೆಗಳನ್ನೂ ಇಂತಹ ಸದಸ್ಯರೇ ಮಾಡಿಕೊಡುತ್ತಿದ್ದು, ಉಗ್ರರಿಗೆ ಬೇಕಾದ ಶಸ್ತ್ರಾಸ್ತ್ರ ಪೂರೈಕೆ, ಅಡಗು ತಾಣಗಳ ವ್ಯವಸ್ಥೆಗಳನ್ನೂ ನೋಡಿಕೊಳ್ಳುತ್ತಾರೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜೊತೆಗೆ ಭದ್ರತಾ ಪಡೆಗಳ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ ಯೋಧರ ವಿರುದ್ಧ ಜನರನ್ನು ಎತ್ತಿಕಟ್ಟುವ, ಅಶಾಂತಿ ಸೃಷ್ಟಿಯ ಕೆಲಸವನ್ನೂ ಈ OGW ಗಳು ಮಾಡುತ್ತಾರೆ. ಗಲಭೆ ಸೃಷ್ಟಿಯ ಹಿಂದೆಯೂ ಬಂಧಿತ ಮಲೀಕ್ನಂತಹ ಅನೇಕ ಒಜಿಡಬ್ಲ್ಯುಗಳ ಕೈವಾಡವಿರುತ್ತದೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಧಿತನನ್ನು ತನ್ವೀರ್ ಅಹಮದ್ ಮಲೀಕ್ ಎಂದು ಗುರುತಿಸಲಾಗಿದೆ. ಈತ ಈ ಹಿಂದೆ ದೋಡಾದ ತಂತ್ನಾ ಗ್ರಾಮದಿಂದ ತಲೆ ಮರೆಸಿಕೊಂಡಿದ್ದ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬಂಧಿತ ಉಗ್ರನಿಂದ ಒಂದು ಚೈನೀಸ್ ಪಿಸ್ತೂಲು, ವೈರ್ ಲೆಸ್ ಸೆಟ್, 10 ಸೂತ್ತಿನ.ಗುಂಡುಗಳು ಹಾಗೂ ಮದ್ದುಗುಂಡು ಗಳನ್ನು ವಶಪಡಿಸಿಕೊಂಡಿದ್ದಾಗಿಯೂ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹೇಳಿಕೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.