ನವದೆಹಲಿ: ವಿಶಾಖಪಟ್ಟಣಂ ಕೆಮಿಕಲ್ ಪ್ಲಾಂಟ್ ಅನಿಲ ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತುರ್ತು ಸಭೆಯನ್ನು ನಡೆಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಯ ಸದಸ್ಯರೊಂದಿಗೆ ಅವರು ಇಂದು 11 ಗಂಟೆಗೆ ಸಭೆಯನ್ನು ನಡೆಸಿ ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ಪರಿಶೀಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಗೃಹ ವ್ಯವಹಾರಗಳ ಅಧಿಕಾರಿಗಳೊಂದಿಗೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಯ ಅಧಿಕಾರಿಗಳೊಂದಿಗೆ ವಿಶಾಖಪಟ್ಟಣಂ ಪರಿಸ್ಥಿತಿಯ ಬಗ್ಗೆ ಸಮಾಲೋಚನೆ ನಡೆಸಿದೆ. ಪರಿಸ್ಥಿತಿಯ ಬಗ್ಗೆ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಪ್ರತಿಯೊಬ್ಬರ ಸುರಕ್ಷತೆಗಾಗಿ ಮತ್ತು ವಿಶಾಖಪಟ್ಟಣಂ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.
Spoke to officials of MHA and NDMA regarding the situation in Visakhapatnam, which is being monitored closely.
I pray for everyone’s safety and well-being in Visakhapatnam.
— Narendra Modi (@narendramodi) May 7, 2020
ಬಳಿಕ ಪ್ರಧಾನಿ ಮಂತ್ರಿ ಕಾರ್ಯಾಲಯವು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿ ಅಧಿಕಾರಿಗಳೊಂದಿಗಿನ ಪ್ರಧಾನಿಯವರ ಸಭೆಯ ಬಗ್ಗೆ ಅಧಿಕೃತ ಮಾಹಿತಿಯನ್ನು ಹೊರಹಾಕಿದೆ.
“ವಿಶಾಖಪಟ್ಟಣಂನಲ್ಲಿ ಸೃಷ್ಟಿಯಾಗಿರುವ ಪರಿಸ್ಥಿತಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಬೆಳಗ್ಗೆ 11 ಗಂಟೆಗೆ ಸಭೆ ನಡೆಸಿದರು” ಎಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.