ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 3 ಗಂಟೆಗೆ ದೇಶದ ಎಲ್ಲಾ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯನ್ನು ನಡೆಸಲಿದ್ದಾರೆ. ಸಭೆಯಲ್ಲಿ ಅವರು ಮೇ 17 ರಂದು ಮುಕ್ತಾಯವಾಗಲಿರುವ ಲಾಕ್ಡೌನ್ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ.
ಮೋದಿ ಸಭೆಯ ಬಗ್ಗೆ ಮಾಹಿತಿಯನ್ನು ನೀಡಿರುವ ಪ್ರಧಾನ ಮಂತ್ರಿ ಕಾರ್ಯಾಲಯ, “ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಲಿದ್ದಾರೆ” ಎಂದು ಟ್ವೀಟ್ ಮಾಡಿದೆ.
ಆರ್ಥಿಕ ಚಟುವಟಿಕೆಯನ್ನು ನಿಧಾನಕ್ಕೆ ಪ್ರಾರಂಭಿಸುವ ಸಂದರ್ಭದಲ್ಲಿ ಕೊರೋನಾವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ಮೋದಿ ಪರಿಶೀಲನೆಯನ್ನು ನಡೆಸುವ ನಿರೀಕ್ಷೆ ಇದೆ.
ರಾಷ್ಟ್ರವ್ಯಾಪಿ ಲಾಕ್ಡೌನ್ ಮುಕ್ತಾಯವಾದ ಬಳಿಕ ನಂತರ ತೆಗೆದುಕೊಳ್ಳಬೇಕಾದ ನಿರ್ಧಾರದ ಬಗ್ಗೆ ಕೂಡ ಮೋದಿ ಅವರು ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಅವರು ಮುಖ್ಯಮಂತ್ರಿಗಳ ಸಲಹೆ-ಸೂಚನೆಗಳನ್ನು ಪಡೆಯಲಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಮಾತ್ರವಲ್ಲದೆ ಈ ಸಭೆಯಲ್ಲಿ ಕೇಂದ್ರ ವಿತ್ತ ಸಚಿವ ನಿರ್ಮಲ ಸೀತಾರಾಮನ್, ಕೇಂದ್ರ ಗೃಹಸಚಿವ ಅಮಿತ್ ಶಾ ಸೇರಿದಂತೆ ಹಲವಾರು ಹಿರಿಯ ಮುಖಂಡರುಗಳು ಭಾಗವಹಿಸುವ ನಿರೀಕ್ಷೆ ಇದೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗವು ಭಾರತದಲ್ಲಿ ಕಾಣಿಸಿಕೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಗಳ ಮುಖ್ಯಮಂತ್ರಿಗಳು ಅಂದಿಗೆ ನಡೆಸುತ್ತಿರುವ 5ನೇ ಸಭೆ ಇದಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.