ನವದೆಹಲಿ: ದಿನದಿಂದ ದಿನಕ್ಕೆ ಭಾರತದ ಕೊರೋನಾ ಸಾಂಕ್ರಾಮಿಕ ರೋಗಿಗಳ ಚೇತರಿಕೆ ಪ್ರಮಾಣವು ಸುಧಾರಣೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಭಾರತದ ಚೇತರಿಕೆ ಪ್ರಮಾಣವು 31.37% ಆಗಿದೆ. ಸಾಂಕ್ರಾಮಿಕ ರೋಗದಿಂದಾಗಿ ಮರಣವನ್ನಪ್ಪುವ ಜನರ ಸಂಖ್ಯೆ ಜಗತ್ತಿನಲ್ಲೇ ಭಾರತದಲ್ಲಿ ಕಡಿಮೆ ಇದೆ. ಇಂದು ಮರಣ ಪ್ರಮಾಣವು 3.2% ಆಗಿದೆ ಎಂದು ಅವರು ಹೇಳಿದ್ದಾರೆ.
ಜಾಗತಿಕವಾಗಿ ಕೊರೋನಾವೈರಸ್ ಸಾಂಕ್ರಾಮಿಕ ಮರಣ ಪ್ರಮಾಣವು 7-7.5% ಇದೆ. ಆದರೆ ಭಾರತದಲ್ಲಿ 3.2% ಇದೆ. ಇನ್ನು ಭಾರತದ ಕೆಲವು ರಾಜ್ಯಗಳಲ್ಲಿ ಮರಣ ಪ್ರಮಾಣವು ಇದಕ್ಕಿಂತಲೂ ಕಡಿಮೆ ಇದೆ ಎಂದು ಅವರು ಹೇಳಿದ್ದಾರೆ.
ಮಂಗಳವಾರ ಬೆಳಿಗ್ಗೆ ಅಂತ್ಯವಾಗುವಂತೆ ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 3,604 ಹೊಸ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಭಾರತದ ಒಟ್ಟು ಸಂಖ್ಯೆ 70, 756ಕ್ಕೆ ಏರಿಕೆಯಾಗಿದೆ. ಇದರಲ್ಲಿ 46,000 ಪ್ರಕರಣಗಳು ಸಕ್ರಿಯ ಪ್ರಕರಣಗಳಾಗಿವೆ.
ಕಳೆದ 24 ಗಂಟೆಗಳಲ್ಲಿ 87 ಸಾವುಗಳು ಸಂಭವಿಸಿವೆ. ಇದುವರೆಗೆ ಸಂಭವಿಸಿದ ಒಟ್ಟು ಸಾವಿನ ಸಂಖ್ಯೆ 2,293 ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.