ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ 74,281ಕ್ಕೆ ಏರಿಕೆಯಾಗಿದೆ. 2,415 ಸಾವುಗಳು ಸಂಭವಿಸಿವೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ.
ದೇಶವ್ಯಾಪಿಯಾಗಿ ವಿಧಿಸಲಾಗಿರುವ ಮೂರನೇ ಹಂತದ ಲಾಕ್ ಡೌನ್ ಮೇ 17 ರಂದು ಅಂತ್ಯವಾಗಲಿದೆ. ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ನಾಲ್ಕನೇ ಹಂತದ ಲಾಕ್ ಡೌನ್ ಬೇರೆ ವಿಧಾನದಲ್ಲಿ ಇರಲಿದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಮೇ 18 ರೊಳಗೆ ಈ ಬಗ್ಗೆ ಮಾಹಿತಿಯನ್ನು ನೀಡುವುದಾಗಿ ಹೇಳಿದ್ದಾರೆ.
ಸಾಂಕ್ರಾಮಿಕ ರೋಗದ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗುತ್ತದೆ, ಆದರೂ ಆರ್ಥಿಕ ಪುನಃಶ್ಚೇತನಕ್ಕೆ ಸಂಬಂಧಿಸಿದಂತೆ ಚಟುವಟಿಕೆಗಳಿಗೆ ಈಗಾಗಲೇ ವಿನಾಯಿತಿ ನೀಡಿದೆ. ಮೇ 18 ರಿಂದ ಯಾವ ರೀತಿಯಲ್ಲಿ ಲಾಕ್ ಡೌನ್ ಇರಬಹುದು ಎಂಬ ಬಗ್ಗೆ ಈಗಾಗಲೇ ಹಲವು ನಿರೀಕ್ಷೆಗಳು ಮೂಡಿವೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಚೇತರಿಕೆ ಪ್ರಮಾಣವು ಭಾರತದಲ್ಲಿ ದಿನದಿಂದ ದಿನಕ್ಕೆ ಸುಧಾರಣೆಗೊಳ್ಳುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಮಂಗಳವಾರ ಇದು ಭಾರತದ ಮಟ್ಟಿಗೆ ಆಶಾದಾಯಕ ಬೆಳವಣಿಗೆಯಾಗಿದೆ.
ಜಾಗತಿಕವಾಗಿ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರ ಸಂಖ್ಯೆ 2.9 ಲಕ್ಷ ದಾಟಿದೆ, 43.3 ಲಕ್ಷ ಜನರು ಸೋಂಕಿಗೆ ತುತ್ತಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.