ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಹಕಾರಿಯಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಅಭಿಪ್ರಾಯಿಸಿದ್ದಾರೆ.
ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆರ್ಥಿಕ ಪ್ಯಾಕೇಜ್ ದೀರ್ಘ ಹೋರಾಟವನ್ನು ನಡೆಸಲಿದೆ ಎಂದು ನಾಯ್ಡು ಹೇಳಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜನ್ನು ನಾನು ಸ್ವಾಗತಿಸುತ್ತೇನೆ. ಇದು ವಿವಿಧ ವಲಯಗಳಿಗೆ ಸುಧಾರಣೆಯನ್ನು ತರುವ ನಿಟ್ಟಿನಲ್ಲಿ ಸಮರ್ಥ ಉತ್ತೇಜನ ನೀಡಲಿದೆ ಮತ್ತು ಭಾರತವನ್ನು ಸ್ವಾವಲಂಬಿಯಾಗಿಸಲಿದೆ” ಎಂದು ನಾಯ್ಡು ಟ್ವೀಟ್ ಮಾಡಿದ್ದಾರೆ.
ಸುಧಾರಣೆಯನ್ನು ಈ ಸಮಯದ ಅವಶ್ಯಕತೆ ಎಂದು ಕರೆದಿರುವ ನಾಯ್ಡು ಅವರು, ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸಲು ನಿರ್ಣಾಯಕ ಸುಧಾರಣೆಗಳು ಸಮಯದ ಅವಶ್ಯಕತೆಯಾಗಿದೆ ಎಂದಿದ್ದಾರೆ.
ಐದು ಆಧಾರ ಸ್ತಂಭಗಳಾದ ಆರ್ಥಿಕತೆ, ಮೂಲಸೌಕರ್ಯ, ತಂತ್ರಜ್ಞಾನ ಆಧಾರಿತ ವ್ಯವಸ್ಥೆ, ಜನಸಂಖ್ಯೆ, ಬೇಡಿಕೆ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು, ಇವುಗಳು ಭಾರತವನ್ನು ಜಾಗತಿಕ ಸ್ಪರ್ಧೆಯ ಮುಖವಾಗಿಸುವುದು ಮಾತ್ರವಲ್ಲ, ಸ್ಥಳೀಯ ಕೈಗಾರಿಕೆಗಳನ್ನು ಉತ್ತೇಜಿಸಲಿದೆ ಎಂದಿದ್ದಾರೆ.
“ಸಕಾಲದಲ್ಲಿ ಘೋಷಣೆ ಮಾಡಲಾದ ಆರ್ಥಿಕ ಪ್ಯಾಕೇಜ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ದೀರ್ಘ ಸಮಯದವರೆಗೆ ಸಹಾಯ ಮಾಡುತ್ತದೆ ಎಂಬ ಭರವಸೆ ನನಗಿದೆ” ಎಂದಿದ್ದಾರೆ.
ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಆರ್ಥಿಕ ಪ್ಯಾಕೇಜನ್ನು ಘೋಷಣೆ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.