ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಣೆ ಮಾಡಿರುವ 20 ಲಕ್ಷ ಕೋಟಿ ರೂಪಾಯಿಗಳ ಆರ್ಥಿಕ ಪ್ಯಾಕೇಜ್ ವಿವರಗಳನ್ನು ಬುಧವಾರ ಪತ್ರಿಕಾಗೋಷ್ಠಿಯ ಮೂಲಕ ನೀಡಿದ್ದ ನಿರ್ಮಲಾ ಸೀತಾರಾಮನ್ ಅವರು, ಕಿರು, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಪುನಶ್ಚೇತನಕ್ಕೆ ಮೂಲಕ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದರು. ಇಂದು ಅವರು ಕೃಷಿ ವಲಯಕ್ಕೆ ಪ್ಯಾಕೇಜ್ ಮೂಲಕ ನೀಡಲಾದ ಪುನಶ್ಚೇತನ ಕ್ರಮಗಳನ್ನು ವಿವರಿಸುವ ನಿರೀಕ್ಷೆಯಿದೆ.
ಇಂದು ಪತ್ರಿಕಾಗೋಷ್ಠಿಯನ್ನು ನಡೆಸಲಿರುವ ನಿರ್ಮಲಾ ಸೀತಾರಾಮನ್ ಅವರು, ಕೃಷಿ ವಲಯ ಮತ್ತು ಅದಕ್ಕೆ ಸಂಬಂಧಿಸಿದ ಇತರ ಚಟುವಟಿಕೆಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಘೋಷಣೆ ಮಾಡಲಿದ್ದಾರೆ. ಪೂರೈಕೆ ಸರಪಳಿ ಸಮಸ್ಯೆಗಳು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಕ್ರಮಗಳನ್ನು ಅವರು ಇಂದು ಘೋಷಿಸುವ ಸಾಧ್ಯತೆ ಇದೆ.
ಐದು ದಿನಗಳ ಕಾಲ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವ ಮೂಲಕ, ಒಂದೊಂದು ವಲಯಗಳಿಗೆ ನೀಡಲಾದ ನೆರವುಗಳನ್ನು ನಿರ್ಮಲಾ ಸೀತಾರಾಮನ್ ಅವರು ವಿವರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ಅವರು ಎರಡನೇ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.
ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಕಾರಣದಿಂದಾಗಿ ಆರ್ಥಿಕತೆಯು ಭಾರಿ ದೊಡ್ಡ ಕುಸಿತವನ್ನು ಕಂಡಿದೆ. ಆರ್ಥಿಕತೆಯನ್ನು ಮೇಲೆತ್ತುವ ಮಹತ್ತರ ಜವಾಬ್ದಾರಿ ಸರ್ಕಾರದ ಮೇಲಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಭಾರತದ ಜಿಡಿಪಿಯ ಶೇಕಡ ಹತ್ತರಷ್ಟು ಭಾಗವಾದ 20 ಲಕ್ಷ ಕೋಟಿ ರೂಪಾಯಿಗಳನ್ನು ಘೋಷಣೆ ಮಾಡಿದ್ದಾರೆ. ಸ್ವಾವಲಂಬಿ ಭಾರತದ ಸಂಕಲ್ಪದೊಂದಿಗೆ ಅವರು ಈ ಆರ್ಥಿಕ ಪ್ಯಾಕೇಜನ್ನು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.