
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಕೊರೋನಾ ವಿರುದ್ಧ ಹೋರಾಡಲು ವೆಂಟಿಲೇಟರ್ಗಳನ್ನು ಕೊಡುಗೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಟ್ರಂಪ್ ಅವರ ಘೋಷಣೆಗೆ ಪ್ರಧಾನಿ ನರೇಂದ್ರ ಮೋದಿಯವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ ಅವರು, “ಈ ಸಾಂಕ್ರಮಿಕದ ವಿರುದ್ಧ ನಾವು ಸಮಗ್ರವಾಗಿ ಹೋರಾಟವನ್ನು ನಡೆಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ, ದೇಶಗಳು ಒಟ್ಟಾಗಿ ಕಾರ್ಯನಿರ್ವಹಿಸುವುದು ಮತ್ತು ಆರೋಗ್ಯವಂತ ವಿಶ್ವವನ್ನು ನಿರ್ಮಾಣ ಮಾಡಲು ಸಾಧ್ಯವಾಗುವುದನ್ನು ಮಾಡುವುದು ಮತ್ತು ಕೊರೋನಾ ಮುಕ್ತವಾಗುವುದು ಅತ್ಯಂತ ಪ್ರಮುಖವಾಗುತ್ತದೆ” ಎಂದಿದ್ದಾರೆ.
Thank you @POTUS @realDonaldTrump.
This pandemic is being fought collectively by all of us. In such times, it’s always important for nations to work together and do as much as possible to make our world healthier and free from COVID-19.
More power to 🇮🇳 – 🇺🇸 friendship! https://t.co/GRrgWFhYzR
— Narendra Modi (@narendramodi) May 16, 2020
ಅಲ್ಲದೇ, ಭಾರತಕ್ಕೆ ಅಮೆರಿಕ ನೀಡುತ್ತಿರುವ ವೆಂಟಿಲೇಟರ್ಗಳು ಭಾರತ ಮತ್ತು ಅಮೆರಿಕದ ನಡುವಿನ ಬಾಂಧವ್ಯಕ್ಕೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಭಾರತವು ಅಮೆರಿಕಾಗೆ ಕೊರೋನಾ ವಿರುದ್ಧ ಹೋರಾಟವನ್ನು ನಡೆಸುವ ಸಲುವಾಗಿ ಹೈಡ್ರಾಕ್ಸಿಕ್ಲೋರುಕ್ವಿನ್ ಮಾತ್ರೆಗಳನ್ನು ಕಳುಹಿಸಿಕೊಟ್ಟಿತ್ತು. ಇದೀಗ ಅಮೆರಿಕವು ಭಾರತಕ್ಕೆ ಕೊರೋನಾ ವಿರುದ್ಧ ಹೋರಾಡಲು ವೆಂಟಿಲೇಟರ್ ನೀಡುವುದಾಗಿ ಘೋಷಣೆ ಮಾಡಿದೆ.
ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಅಮೆರಿಕದ ನಡುವಿನ ಸಂಬಂಧ ಅತ್ಯಂತ ಕಟ್ಟಿಕೊಳ್ಳುತ್ತದೆ ಎಂಬುದಕ್ಕೆ ಇದು ನಿದರ್ಶನಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


