ಬೆಂಗಳೂರು: ಕೊರೋನಾ ವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ರಾಜ್ಯದ ಎಸ್ಎಸ್ಎಲ್ಸಿ ಮತ್ತು ಪಿಯುಸಿಯ ಇಂಗ್ಲಿಷ್ ಪತ್ರಿಕೆಯ ಪರೀಕ್ಷೆ ನಡೆಸಲು ನಿರ್ಧರಿಸಿದ ದಿನಾಂಕಗಳನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಘೋಷಿಸಿದ್ದಾರೆ.
ಈ ವರ್ಷದ ಜೂನ್ 25 ರಿಂದ ತೊಡಗಿದಂತೆ ಜುಲೈ 5 ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಿರ್ಧರಿಸಲಾಗಿದೆ. ಅದರಂತೆ ಪಿಯುಸಿಯ ಬಾಕಿ ಉಳಿದಿದ್ದ ಇಂಗ್ಲೀಷ್ ಪತ್ರಿಕೆಯ ಪರೀಕ್ಷೆಯನ್ನು ಜೂನ್ 18 ರಂದು ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ. ಶಿಕ್ಷಣ ತಜ್ಞರ ಜೊತೆಗೆ, ಶಿಕ್ಷಕರು, ಪೋಷಕರ ಜೊತೆಗೆ ಮಾತುಕತೆ ನಡೆಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುವುದಾಗಿಯೂ ಅವರು ತಿಳಿಸಿದ್ದಾರೆ. ವಲಸೆ ಕಾರ್ಮಿಕರು ಮತ್ತು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರ ಬದಲಾವಣೆಗೂ ಅವಕಾಶ ನೀಡಲಾಗಿದೆ.
ಇನ್ನು ಪರೀಕ್ಷಾ ಕೇಂದ್ರಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳನ್ನು ಅನುಸರಿಸಲಾಗುವುದಾಗಿಯೂ ಅವರು ತಿಳಿಸಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಹಿತ ಕಾಪಾಡುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಜಿಂಗ್, ಮಾಸ್ಕ್ ಕಡ್ಡಾಯ ಕ್ರಮಗಳನ್ನು ಅನುಸರಿಸುವುದಾಗಿಯೂ ಸಚಿವರು ತಿಳಿಸಿದ್ದಾರೆ. ಹಾಗೆಯೇ ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಬಳಕೆ ಮಾಡಿ ಪರೀಕ್ಷೆ ನಡೆಸುವುದಾಗಿಯೂ ಅವರು ತಿಳಿಸಿದ್ದಾರೆ. ಇನ್ನು ಡಿಡಿ ಚಂದನದಲ್ಲಿ ಮಾದರಿ ಪತ್ರಿಕೆಗಳ ಪ್ರಶ್ನೋತ್ತರ ಕಾರ್ಯಕ್ರಮ ನಡೆಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ.
ಜೊತೆಗೆ ಪರೀಕ್ಷೆಯ ನಂತರದಲ್ಲಿ ಶೀಘ್ರ ಮೌಲ್ಯಮಾಪನ, ಫಲಿತಾಂಶ, ಮರು ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುವ ಭರವಸೆಯನ್ನು ಸಚಿವರು ನೀಡಿದ್ದಾರೆ. ಆ ಮೂಲಕ ವಿದ್ಯಾರ್ಥಿಗಳ ಪರೀಕ್ಷಾ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.