ನವದೆಹಲಿ: ಕಛೇರಿಗೆ ಬಂದು ಕಾರ್ಯನಿರ್ವಹಿಸುವಂತೆ ಶೇ. 50% ರಷ್ಟು ಕಿರಿಯ ಉದ್ಯೋಗಗಳಿಗೆ ಸೋಮವಾರ ಕೇಂದ್ರ ಸರಕಾರ ಆದೇಶ ನೀಡಿದೆ. ಉಪ ಕಾರ್ಯದರ್ಶಿಗಳ ಮಟ್ಟಕ್ಕಿಂತ ಕೆಳಗಿನ ಉದ್ಯೋಗಿಗಳಿಗೆ ಕಚೇರಿಗೆ ಆಗಮಿಸುವಂತೆ ತಿಳಿಸಲಾಗಿದೆ.
ಇದುವರೆಗೆ, ಶೇ. 33 ರಷ್ಟು ಉದ್ಯೋಗಿಗಳಿಗೆ ಮಾತ್ರ ಕಚೇರಿಗೆ ಆಗಮಿಸಲು ಅವಕಾಶವಿತ್ತು. ಇದೀಗ ಶೇ. 50 ರಷ್ಟು ಸಿಬ್ಬಂದಿಗೆ ಕಚೇರಿಗೆ ಆಗಮಿಸಲು ಸೂಚನೆ ನೀಡಲಾಗಿದೆ.
ಕೇಂದ್ರ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯನ್ನು ಸಹಜ ಸ್ಥಿತಿಗೆ ತರುವ ನಿಟ್ಟಿನಲ್ಲಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ವೈಯಕ್ತಿಕ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ತಿಳಿಸಿದ್ದಾರೆ.
“ಕೇಂದ್ರ ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣೆಯನ್ನು ಸಹಜ ಸ್ಥಿತಿಗೆ ತರುವ ಸಲುವಾಗಿ ಶೇಕಡ 50 ರಷ್ಟು ಉದ್ಯೋಗಿಗಳಿಗೆ ಆಗಮಿಸುವಂತೆ ತಿಳಿಸಲಾಗಿದೆ. ಇದರಿಂದ ಕಚೇರಿಯಲ್ಲಿನ ಕೆಲಸ ಪರಿಣಾಮಕಾರಿ ಮತ್ತು ತ್ವರಿತಗೊಳ್ಳಲಿದೆ” ಎಂದಿದ್ದಾರೆ.
ಆಗಮಿಸುವ ಸಿಬ್ಬಂದಿಗಳಿಗೆ ಸಾಮಾಜಿಕ ಅಂತರ ಸೇರಿದಂತೆ ಸೋಂಕು ತಡೆಗಟ್ಟುವ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ವಿಧಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಚೇರಿಗೆ ಆಗಮಿಸಿದ ಸಿಬ್ಬಂದಿಗಳು ಮನೆಯಿಂದಲೇ ಕಾರ್ಯನಿರ್ವಹಿಸುವ ಆಯ್ಕೆಯನ್ನು ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.