ನವದೆಹಲಿ: ಭಾರತವು ಎರಡು ತಿಂಗಳ ಅಲ್ಪಾವಧಿಯಲ್ಲಿಯೇ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ಬಾಡಿ ಕವರಲ್ಗಳನ್ನು ತಯಾರಿಸುವ ವಿಶ್ವದ ಎರಡನೇ ಅತಿದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಸರ್ಕಾರ ಗುರುವಾರ ತಿಳಿಸಿದೆ.
COVID-19 ಸಾಂಕ್ರಾಮಿಕ ರೋಗದಿಂದ ರಕ್ಷಿಸಲು ಬಳಸುವ ಪಿಪಿಇ ಅನ್ನು ಉತ್ಪಾದನೆ ಮಾಡುವುದರಲ್ಲಿ ಚೀನಾ ವಿಶ್ವದ ಅಗ್ರಗಣ್ಯ ರಾಷ್ಟ್ರವಾಗಿದೆ. ಭಾರತ ಎರಡನೇ ಸ್ಥಾನದಲ್ಲಿದೆ.
ಎರಡು ತಿಂಗಳ ಅಲ್ಪಾವಧಿಯಲ್ಲಿಯೇ ಪಿಪಿಇ ಕವರಲ್ ಗುಣಮಟ್ಟ ಮತ್ತು ಪ್ರಮಾಣವು ಅಪೇಕ್ಷಿತ ಮಟ್ಟದಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದು ಭಾರತವನ್ನು ಬಾಡಿ ಕವರಲ್ಗಳ ತಯಾರಿಕೆಯಲ್ಲಿ ವಿಶ್ವದ ಎರಡನೆಯ ಅತೀ ದೊಡ್ಡ ರಾಷ್ಟ್ರವನ್ನಾಗಿ ಮಾಡಿದೆ ಎಂದು ಜವಳಿ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಇಡೀ ಸರಬರಾಜು ಸರಪಳಿಯಲ್ಲಿ ಪ್ರಮಾಣೀಕೃತ ಸಂಸ್ಥೆಗಳಿಗೆ ಮಾತ್ರ ಸರ್ಕಾರವು ಬಾಡಿ ಕವರಲ್ಗಳನ್ನು ಪೂರೈಸಲು ಅವಕಾಶವನ್ನು ಮಾಡಿಕೊಟ್ಟಿದೆ. ಇದನ್ನು ಖಚಿತಪಡಿಸಿಕೊಳ್ಳಲು ಸಚಿವಾಲಯ ಕ್ರಮ ಕೈಗೊಂಡಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಅಲ್ಲದೆ, ಜವಳಿ ಸಮಿತಿ, ಮುಂಬೈ ಕೂಡ ಈಗ ಆರೋಗ್ಯ ಕಾರ್ಯಕರ್ತರು ಮತ್ತು ಇತರ ಕೋವಿಡ್-19 ಯೋಧರಿಗೆ ಅಗತ್ಯವಾದ ಪಿಪಿಇ ಬಾಡಿ ಕವರಲ್ಗಳನ್ನು ಪರೀಕ್ಷಿಸಿ ಪ್ರಮಾಣೀಕರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.