News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ ಕ್ವಾರಂಟೈನ್ : ರಾಜ್ಯ ಸರ್ಕಾರದಿಂದ ಹೊಸ ಕ್ರಮ

ಬೆಂಗಳೂರು: ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಾದ ನಂತರ ಕೊರೋನಾ ಸೋಂಕಿನ ಸಂಕಷ್ಟ ದಿನೇ ದಿನೆ ಏರಿಕೆಯಾಗುತ್ತಲೇ ಇದೆ. ಶಂಕಿತ, ಸೋಂಕಿತರ ಕ್ವಾರಂಟೈನ್ ಸಹ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಸಮಸ್ಯೆಯನ್ನು ನಿರ್ವಹಣೆ ಮಾಡಲು ರಾಜ್ಯ ಸರ್ಕಾರ ಇದೀಗ ಹೊಸ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ.

ಕೊರೋನಾ ಪರಿಸ್ಥಿತಿ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ದೆಹಲಿ ರಾಜ್ಯಗಳನ್ನು ಹೊರತು ಪಡಿಸಿದಂತೆ, ಬೇರೆ ರಾಜ್ಯದಿಂದ ಕರ್ನಾಟಕಕ್ಕೆ ಸೇವಾ ಸಿಂಧು ವೆಬ್ಸೈಟ್ ಮೂಲಕ ನೋಂದಾಯಿಸಿಕೊಂಡು ಆಗಮಿಸುವವರಿಗೆ ಸಾಂಸ್ಥಿಕ ಕ್ವಾರಂಟೈನ್ ಕ್ರಮದಿಂದ ವಿನಾಯಿತಿ ನೀಡಲಾಗಿದೆ.

ರಾಜ್ಯದೊಳಗೆ ಇನ್ನಿತರ ರಾಜ್ಯಗಳಿಂದ ಪ್ರವೇಶಿಸುವವರಿಗೆ 14 ದಿನಗಳ ಸಾಂಸ್ಥಿಕ ಹಾಗು 14 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ ಎಂಬ ಆದೇಶವನ್ನು ಸರ್ಕಾರ ಇದೀಗ ಹಿಂಪಡೆದಿದೆ. ಜೊತೆಗೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ, ಮೇಲೆ ತಿಳಿಸಿದ ರಾಜ್ಯಗಳಿಂದ ಆಗಮಿಸುವವರಿಗೆ 7 ದಿನಗಳ ಸಾಂಸ್ಥಿಕ ಮತ್ತು 7 ದಿನಗಳ ಹೋಂ ಕ್ವಾರಂಟೈನ್ ಕ್ರಮ ಅನುಸರಿಸುವಂತೆ ಮತ್ತು ಕ್ವಾರಂಟೈನ್­ನ 5 ನೇ ದಿನ ಅಥವಾ 7 ನೇ ದಿನ ಅವರನ್ನು ಕೊರೋನಾ ಟೆಸ್ಟ್­ಗೆ ಒಳಪಡಿಸುವಂತೆಯೂ ಸೂಚಿಸಲಾಗಿದೆ. ಉಳಿದ ರಾಜ್ಯಗಳಿಂದ ಬರುವವರಿಗೆ 14 ದಿನ ಹೋಂ ಕ್ವಾರಂಟೈನ್ ವಿಧಿಸಿ, ಅವರ ಮೇಲೆ ಸ್ಥಳೀಯ ಆರೋಗ್ಯ ಕಾರ್ಯಕರ್ತರು ನಿಗಾ ವಹಿಸಲಿರುವುದಾಗ ಸರ್ಕಾರ ಈ ಮಾರ್ಗಸೂಚಿ ಯಲ್ಲಿ ತಿಳಿಸಿದೆ.

ಇನ್ನು 80 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿಯರಿಗೆ, 10 ವರ್ಷದೊಳಗಿನ ಮಕ್ಕಳಿಗೆ, ಗಂಭೀರ ಆರೋಗ್ಯ ಸಮಸ್ಯೆ ಹೊಂದಿದವರು, ರಕ್ಷಣಾ ಸಿಬ್ಬಂದಿ, ವೈದ್ಯಕೀಯ ಸಿಬ್ಬಂದಿಗಳಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಲಾಗಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಕಾರ್ಯ ನಿಮಿತ್ತ, ಉದ್ಯಮಗಳ ಕಾರಣಕ್ಕೆ ಬರುವವರಿಗೆ ಕ್ವಾರಂಟೈನ್ ಕ್ರಮ ಅನ್ವಯವಾಗುವುದಿಲ್ಲ. ಬದಲಾಗಿ ಅವರು ಐಸಿಎಂಆರ್ ನಿಂದ ಪ್ರಮಾಣೀಕರಿಸಿದ ಕೋವಿಡ್ ಟೆಸ್ಟ್ ನೆಗೆಟಿವ್ ವರದಿಯನ್ನು ಸಲ್ಲಿಸುವಂತೆಯೂ ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top