ಬೆಂಗಳೂರು: ಕೊರೋನಾ ಹೋರಾಟದಲ್ಲಿ ಕರ್ನಾಟಕ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಕೇವಲ ಒಂದೇ ದಿನದಲ್ಲಿ 11,449 ಕೋವಿಡ್-19 ಟೆಸ್ಟ್ಗಳನ್ನು ನಡೆಸಿದೆ. ಎಪ್ರಿಲ್ 22 ರಂದು 3,279 ರಷ್ಟು ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, ಸದ್ಯ ಇದು 250% ದಷ್ಟು ಹೆಚ್ಚಳವಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಸಂದರ್ಭದಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಗುರುವಾರ ರಾಜ್ಯದಲ್ಲಿ ಸುಮಾರು 11 ಸಾವಿರಕ್ಕು ಅಧಿಕ ಕೊರೋನಾ ಟೆಸ್ಟ್ ನಡೆಸಲಾಗಿದೆ. ಮೇ 31 ರ ವೇಳೆಗೆ 10 ಸಾವಿರ ಟೆಸ್ಟ್ಗಳನ್ನು ನಡೆಸುವ ಸಾಮರ್ಥ್ಯವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತಿತ್ತು. ಆದರೆ ಅದಕ್ಕೂ ಮುನ್ನವೇ ರಾಜ್ಯ 11 ಸಾವಿರದಷ್ಟು ಪರೀಕ್ಷೆಗಳನ್ನು ನಡೆಸುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಇತರ ರಾಜ್ಯಗಳಿಗಿಂತ ಹೆಚ್ಚು ಯಶಸ್ವಿಯಾಗಿ ರಾಜ್ಯದಲ್ಲಿ ಕೊರೋನಾ ಸಂಕಷ್ಟವನ್ನು ನಿಭಾಯಿಸಲಾಗುತ್ತಿದೆ ಎಂದೂ ಸುಧಾಕರ್ ಮಾಹಿತಿ ನೀಡಿದ್ದಾರೆ. ಶಿವಮೊಗ್ಗ ಮತ್ತು ಮಂಗಳೂರಿನಲ್ಲಿನ ಕೊರೋನಾ ಟೆಸ್ಟಿಂಗ್ ಲ್ಯಾಬ್ಗಳಲ್ಲಿ ಅತೀ ಹೆಚ್ಚು ಟೆಸ್ಟ್ ಗಳನ್ನು ನಡೆಸಿರುವುದಾಗಿ ಅವರು ತಿಳಿಸಿದ್ದಾರೆ.
ಮಾರ್ಚ್ 22 ರ ವೇಳೆ 10 ರಷ್ಟು ಮಾತ್ರವೇ ಕೊರೋನಾ ಪರೀಕ್ಷೆಯನ್ನು ಮಾಡುವ ಸಾಮರ್ಥ್ಯ ಹೊಂದಿದ್ದ ರಾಜ್ಯ, ಕೇವಲ ಎರಡೇ ತಿಂಗಳಿನಲ್ಲಿ ಅತ್ಯಧಿಕ ಕೊರೋನಾ ಟೆಸ್ಟ್ಗಳನ್ನು ಮಾಡುವ ಸಾಮರ್ಥ್ಯ ಹೊಂದುವಂತಾಗಿದೆ. ಅಲ್ಲದೆ ಅತ್ಯಧಿಕ ಕೊರೋನಾ ಪರೀಕ್ಷೆಗಳನ್ನು ನಡೆಸುತ್ತಿರುವ ಟಾಪ್ 5 ರಾಜ್ಯಗಳಲ್ಲಿ ಸ್ಥಾನ ಪಡೆದಿರುವುದಾಗಿಯೂ ಸುಧಾಕರ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನ 36 ಕೊರೋನಾ ಟೆಸ್ಟಿಂಗ್ ಲ್ಯಾಬ್ನಲ್ಲಿ ಈವರೆಗೆ 1.8 ಲಕ್ಷಗಳಷ್ಟು ಕೊರೋನಾ ಟೆಸ್ಟ್ಗಳನ್ನು ನಡೆಸಿರುವ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.