ಲಕ್ನೋ: ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು “ವಲಸೆ ಆಯೋಗ” ವನ್ನು ರಚಿಸಲು ನಿರ್ಧರಿಸಿದೆ. ಇತ್ತೀಚೆಗೆ ಕೋವಿಡ್ -19 ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮರಳಿದ ವಲಸೆ ಕಾರ್ಮಿಕರಿಗೆ ಉದ್ಯೋಗ ನೀಡುವ ಜವಾಬ್ದಾರಿಯನ್ನು ಈ ಆಯೋಗಕ್ಕೆ ವಹಿಸಲಾಗುವುದು ಎಂದು ವರದಿಗಳು ತಿಳಿಸಿವೆ.
ಅಂದಾಜು 23 ಲಕ್ಷ ವಲಸೆ ಕಾರ್ಮಿಕರು ಉತ್ತರ ಪ್ರದೇಶಕ್ಕೆ ಮರಳಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಕಾರ್ಮಿಕರಿಗೆ ಸೂಕ್ತ ಉದ್ಯೋಗವನ್ನು ಒದಗಿಸುವಂತೆ ರಾಜ್ಯದ ಸಂಸ್ಥೆಗಳಿಗೆ ಆದೇಶಿಸಿದ್ದಾರೆ.
1,000 ರೂಪಾಯಿಗಳ ನಗದು ನೆರವನ್ನು ಯೋಗಿ ಸರ್ಕಾರ ಕಾರ್ಮಿಕರಿಗೆ ನೀಡುತ್ತಿದೆ. ಅಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಅವರಿಗೆ ಉದ್ಯೋಗವನ್ನು ಖಾತ್ರಿಪಡಿಸಿಕೊಳ್ಳಲು ಅವರ ಕೌಶಲ್ಯ ಹೆಚ್ಚಿಸುವ ಯೋಜನೆಗಳನ್ನು ರೂಪಿಸುತ್ತಿದೆ.
ಹಿಂದಿರುಗಿದ ವಲಸೆ ಕಾರ್ಮಿಕರಿಗೆ ಉದ್ಯೋಗವನ್ನು ಸೃಷ್ಟಿಸುವ ಸಲುವಾಗಿ ಎಕ್ಸ್ಪ್ರೆಸ್ವೇ ಯೋಜನೆಗಳನ್ನು ವೇಗವಾಗಿ ಟ್ರ್ಯಾಕ್ ಮಾಡಲು ರಾಜ್ಯ ನಿರ್ಧರಿಸಿದೆ ಎಂದು ಈ ಹಿಂದೆ ವರದಿ ಮಾಡಲಾಗಿತ್ತು. ಎಕ್ಸ್ಪ್ರೆಸ್ವೇ ಯೋಜನೆಗಳಿಗೆ ಅನುಕೂಲವಾಗುವಂತೆ ಯುಪಿ ಎಕ್ಸ್ಪ್ರೆಸ್ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (ಯುಪಿಇಡಿಎ) ಬ್ಯಾಂಕ್ ಸಾಲ 9,275 ಕೋಟಿ ರೂ.ಅನ್ನು ಪಡೆದುಕೊಳ್ಳಲಿದೆ.
ಎಕ್ಸ್ಪ್ರೆಸ್ವೇ ಯೋಜನೆಗಳಲ್ಲಿ ಬುಂದೇಲ್ಖಂಡ್ ಎಕ್ಸ್ಪ್ರೆಸ್ ವೇ, ಗೋರಖ್ಪುರ್ ಲಿಂಕ್ ಎಕ್ಸ್ಪ್ರೆಸ್ ವೇ ಮತ್ತು ಪೂರ್ವಾಂಚಲ್ ಎಕ್ಸ್ಪ್ರೆಸ್ ವೇಗಳೂ ಸೇರಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.