ಲಕ್ನೋ: ಸಕಾರಾತ್ಮಕ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು 628 ಕಿಲೋಮೀಟರ್ ಉದ್ದದ ಗಂಗಾ ಎಕ್ಸ್ಪ್ರೆಸ್ ಹೆದ್ದಾರಿಯ ನಿರ್ಮಾಣವನ್ನು ಪ್ರಾರಂಭಿಸಲು ಸಜ್ಜಾಗಿದ್ದು, ರಾಜ್ಯದ ಬೊಕ್ಕಸಕ್ಕೆ 30,000 ಕೋಟಿ ರೂ. ವೆಚ್ಚವಾಗಲಿದೆ ಎಂದು ವರದಿಗಳು ತಿಳಿಸಿವೆ.
ಯುಪಿ ಎಕ್ಸ್ಪ್ರೆಸ್ವೇ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರ (ಯುಪಿಇಡಿಎ)ದಿಂದ ಇದು ಕಾರ್ಯಗತಗೊಳ್ಳಲಿದೆ, ಎಕ್ಸ್ಪ್ರೆಸ್ವೇ ಕಾಮಗಾರಿಯ ಅರಂಭವೂ ರಾಜ್ಯಕ್ಕೆ ಒಂದು ಪ್ರಮುಖ ಉತ್ತೇಜನವಾಗಿದೆ. ಯುಪಿ ಈಗಾಗಲೇ 42,500 ಕೋಟಿ ರೂ.ಗಳಿಗಿಂತ ಹೆಚ್ಚಿನ ವೆಚ್ಚದಲ್ಲಿ ಇತರ ಮೂರು ಎಕ್ಸ್ಪ್ರೆಸ್ ಹೆದ್ದಾರಿಗಳ ನಿರ್ಮಾಣಕ್ಕೆ ಸಾಕ್ಷಿಯಾಗಿದೆ.
ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಇತರ ಎಕ್ಸ್ಪ್ರೆಸ್ವೇ ಯೋಜನೆಗಳಂತೆ ಸ್ಪರ್ಧಾತ್ಮಕ ಬಿಡ್ಡಿಂಗ್ ಪ್ರಕ್ರಿಯೆಯ ಆಧಾರದ ಮೇಲೆ ಆಯ್ಕೆಯಾಗುವ ರಿಯಾಯಿತಿದಾರರಿಂದ ಏಕಕಾಲಿಕ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಇಡೀ ಎಕ್ಸ್ಪ್ರೆಸ್ವೇ ನಿರ್ಮಾಣವನ್ನು 12 ಪ್ರತ್ಯೇಕ ಪ್ಯಾಕೇಜ್ಗಳಾಗಿ ವಿಂಗಡಿಸಲಾಗಿದೆ.
ರಾಜ್ಯದಲ್ಲಿ ಈಗಾಗಲೇ ನಿರ್ಮಾಣ ಹಂತದಲ್ಲಿರುವ ಇತರ ಎಕ್ಸ್ಪ್ರೆಸ್ವೇ ಯೋಜನೆಗಳು 340 ಕಿಲೋಮೀಟರ್ ಉದ್ದದ ಪೂರ್ವಾಂಚಲ್ ಎಕ್ಸ್ಪ್ರೆಸ್ ವೇ, 296 ಕಿಲೋಮೀಟರ್ ಉದ್ದದ ಬುಂದೇಲ್ಖಂಡ್ ಎಕ್ಸ್ಪ್ರೆಸ್ ವೇ ಮತ್ತು 91 ಕಿಲೋಮೀಟರ್ ಉದ್ದದ ಗೋರಖ್ಪುರ್ ಎಕ್ಸ್ಪ್ರೆಸ್ ವೇ.
ಈ ವರ್ಷದ ಆರಂಭದಲ್ಲಿ ಅಂದರೆ ಫೆಬ್ರವರಿ 29 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಆರಂಭವನ್ನು ಕಂಡ ಬುಂದೇಲ್ಖಂಡ್ ಎಕ್ಸ್ಪ್ರೆಸ್ವೇ ಈಗಾಗಲೇ ಯುಪಿಇಡಿಎ ನಿರ್ಮಾಣದ ಶೇಕಡಾ 5 ರಷ್ಟು ನಿರ್ಮಾಣಕ್ಕೆ ಸಾಕ್ಷಿಯಾಗಿದೆ.
ಈ ನಡುವೆ, ಪೂರ್ವಾಂಚಲ್ ಎಕ್ಸ್ಪ್ರೆಸ್ವೇ ನಿರ್ಮಾಣವು ಶೇಕಡಾ 44 ರಷ್ಟು ಪೂರ್ಣಗೊಂಡಿದೆ ಮತ್ತು ಯುಪಿಇಡಿಎ ಮೇ ಅಂತ್ಯದ ವೇಳೆಗೆ ಶೇಕಡಾ 50 ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.