
ನವದೆಹಲಿ: ಭಾರತೀಯ ಮತ್ತು ಇಸ್ರೇಲಿ ತಜ್ಞರು ಜಂಟಿಯಾಗಿ ಕ್ಷಿಪ್ರ ಪರೀಕ್ಷಾ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಿದ್ದು, ಇದನ್ನು ಒಂದು ನಿಮಿಷಕ್ಕಿಂತ ಕಡಿಮೆ ಅವಧಿಯಲ್ಲಿ ಕೋವಿಡ್ -19 ಪರೀಕ್ಷೆಯನ್ನು ನಡೆಸಲು ಬಳಸಬಹುದು. ಇದು ಉಭಯ ದೇಶಗಳ ನಡುವಿನ ಉನ್ನತ ಮಟ್ಟದ ಆರ್ & ಡಿ ಸಹಕಾರವಾಗಿದೆ ಎಂದು ವರದಿಗಳು ತಿಳಿಸಿವೆ.
ಈ ಪರೀಕ್ಷೆಯು ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತದೆ ಮತ್ತು ಜನರಿಗೆ ಪರೀಕ್ಷೆಯ ಬಳಿಕ ಸಾಮಾನ್ಯ ದಿನಚರಿಗೆ ಮರಳಲು ಅನುವು ಮಾಡಿಕೊಡುತ್ತದೆ.
ಪ್ರಧಾನ ಭಾರತೀಯ ಏಜೆನ್ಸಿಗಳಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಓ) ಮತ್ತು ಕೌನ್ಸಿಲ್ ಫಾರ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್)ಯು ಇಸ್ರೇಲ್ನ ಆರ್ & ಡಿ ನಿರ್ದೇಶನಾಲಯದೊಂದಿಗೆ ಕೈಜೋಡಿಸುವ ನಿರೀಕ್ಷೆಯಿದೆ.
ಕ್ವಾಂಟಮ್ ಕಂಪ್ಯೂಟಿಂಗ್, ಕೃತಕ ಬುದ್ಧಿಮತ್ತೆ ಮತ್ತು ರೊಬೊಟಿಕ್ಸ್ನಂತಹ ಕ್ಷೇತ್ರಗಳಿಗೆ ಸಂಬಂಧಿಸಿದ ಆರ್ & ಡಿ ಪ್ರಯತ್ನಗಳ ಬಗ್ಗೆ ಭಾರತವು ಹಿಂದೆ ಇಸ್ರೇಲ್ನೊಂದಿಗೆ ಕೈಜೋಡಿಸಿತ್ತು.
SARS-CoV-2 ವೈರಸ್ಗೆ ಕಾರಣವಾಗುವ ಕೋವಿಡ್ -19 ಗೆ ಮೊನೊಕ್ಲೋನಲ್ ಪ್ರತಿಕಾಯವನ್ನು ಅಭಿವೃದ್ಧಿಪಡಿಸಿದೆ ಎಂದು ಇಸ್ರೇಲ್ ಇತ್ತೀಚೆಗೆ ಘೋಷಿಸಿತ್ತು. ಅಂತಿಮ ಕ್ಲಿನಿಕಲ್ ಫಲಿತಾಂಶಗಳು ಲಭ್ಯವಾದ ನಂತರ ಫಲಿತಾಂಶಗಳನ್ನು ಪ್ರಪಂಚದೊಂದಿಗೆ ಅದು ಹಂಚಿಕೊಳ್ಳುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


