ನವದೆಹಲಿ: ಭಾರತದಲ್ಲಿ ಕೊರೋನಾವೈರಸ್ ಪೀಡಿತಗೊಂಡಿದ್ದ ಒಟ್ಟು 67,692 ಜನರು ಇದುವರೆಗೆ ಗುಣಮುಖರಾಗಿದ್ದಾರೆ ಮತ್ತು ಚೇತರಿಕೆಯ ಪ್ರಮಾಣವು ದೇಶದಲ್ಲಿ ಶೇಕಡಾ 42.75 ಕ್ಕೆ ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಕಳೆದ 24 ಗಂಟೆಗಳಲ್ಲಿ, 3,266 ಜನರು ಚೇತರಿಸಿಕೊಂಡಿದ್ದಾರೆ ಮತ್ತು ಕೋವಿಡ್ -19ನ 6,566 ಹೊಸ ಪ್ರಕರಣಗಳು ದೇಶದಲ್ಲಿ ವರದಿಯಾಗಿದೆ.
ಭಾರತದಲ್ಲಿ ಇದುವರೆಗೆ ಒಟ್ಟು 1 ಲಕ್ಷದ 58 ಸಾವಿರದ 333 ಪ್ರಕರಣಗಳು ವರದಿಯಾಗಿದೆ. ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ 194 ಸಾವುಗಳು ದೇಶಾದ್ಯಂತ ವರದಿಯಾಗಿವೆ. ಈ ಮೂಲಕ ದೇಶದ ಒಟ್ಟು ಸಾವು ಪ್ರಕರಣ 4531ಕ್ಕೆ ಏರಿದೆ.
ದಿನದಿಂದ ದಿನಕ್ಕೆಕೊರೋನವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಚೇತರಿಕೆ ದರವೂ ಹೆಚ್ಚುತ್ತಿರುವುದು ಕೊಂಚ ನಿರಾಳತೆಯನ್ನು ನೀಡಿದೆ.
ಪ್ರಸ್ತುತ ದೇಶದಲ್ಲಿ ಲಾಕ್ ಡೌನ್ ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಜನರು ಸ್ವಯಂ ಪ್ರೇರಣೆಯಿಂದ ಸಾಮಾಜಿಕ ಅಂತರದಂತಹ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕಿದೆ. ಕೊರೋನವೈರಸ್ ಸರಪಳಿಯನ್ನು ಮುರಿಯಲು ಇದು ಅನಿವಾರ್ಯ ಕೂಡ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.