ನವದೆಹಲಿ: ಕಳೆದ ಎರಡು ತಿಂಗಳಲ್ಲಿ ದೇಶದ ಒಟ್ಟು 9.67 ಕೋಟಿ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ಹಣಕಾಸು ನೆರವು ದೊರೆತಿದೆ.
ಮೂಲಗಳ ಪ್ರಕಾರ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಕಳೆದ ಎರಡು ತಿಂಗಳಲ್ಲಿ 19 ಸಾವಿರ ಕೋಟಿ ರೂಪಾಯಿಗಳ ಹಣಕಾಸು ನೆರವನ್ನು 9.67 ಕೋಟಿ ರೈತರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ಕೇಂದ್ರ ಸರಕಾರವು ದೇಶದ ರೈತರ ಖಾತೆಗಳಿಗೆ ವಾರ್ಷಿಕವಾಗಿ ತಲಾ ಆರು ಸಾವಿರ ರೂಪಾಯಿಗಳನ್ನು ವರ್ಗಾವಣೆ ಮಾಡುತ್ತದೆ. ಕೊರೋನವೈರಸ್ ಸಾಂಕ್ರಮಿಕ ರೋಗದ ಹಿನ್ನೆಲೆಯಲ್ಲಿ ದೇಶವ್ಯಾಪಿಯಾಗಿ ಲಾಕ್ಡೌನ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ, ಮುಂಗಡವಾಗಿ ರೈತರ ಖಾತೆಗಳಿಗೆ ಹಣವನ್ನು ಬಿಡುಗಡೆ ಮಾಡಲಾಗಿದೆ.
ಇಷ್ಟು ಮಾತ್ರವಲ್ಲದೆ ಕೇಂದ್ರ ಸರಕಾರವು ಜನರ ಅನುಕೂಲಕ್ಕಾಗಿ, ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆ (ಪಿಎಂ-ಜಿಕೆವೈ) ಅಡಿಯಲ್ಲಿ 4.57 ಲಕ್ಷ ಮೆಟ್ರಿಕ್ ಟನ್ ದ್ವಿದಳ ಧಾನ್ಯಗಳನ್ನು ರಾಜ್ಯ ಮತ್ತು ಕೇಂದ್ರ ಪ್ರದೇಶಗಳಿಗೆ ರವಾನಿಸಿದೆ. ಇದರಲ್ಲಿ 1.78 ಲಕ್ಷ ಮೆಟ್ರಿಕ್ ಟನ್ ದ್ವಿದಳ ಧಾನ್ಯಗಳನ್ನು 13.4 ಕೋಟಿ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.