ನವದೆಹಲಿ: ದೆಹಲಿಯಲ್ಲಿನ ಎಎಪಿ ಸರ್ಕಾರ ಕೇಂದ್ರದ ವಿರುದ್ಧ ಮತ್ತೊಂದು ಸುತ್ತಿನ ಸಮರವನ್ನು ಸಾರಿದೆ. ನಗರದಾದ್ಯಂತ ಪೋಸ್ಟರ್ಗಳನ್ನು ಅಂಟಿಸಿ, ನಮ್ಮನ್ನು ಕಾರ್ಯನಿರ್ವಹಿಸಲು ಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಮಾಡಿದೆ.
ಭ್ರಷ್ಟಾಚಾರ ನಿಗ್ರಹ ದಳ ಮತ್ತು ದೆಹಲಿ ಮಹಿಳಾ ಆಯೋಗದ ನೇಮಕಗಳಲ್ಲಿ ಕೇಂದ್ರ ಮಧ್ಯಪ್ರವೇಶ ಮಾಡುತ್ತಿದೆ ಎಂದು ಆರೋಪಿಸಿರುವ ಎಎಪಿ, ‘ಪ್ರಧಾನಿಯವರೇ, ದಯವಿಟ್ಟು ದೆಹಲಿ ಸರ್ಕಾರಕ್ಕೆ ಕೆಲಸ ಮಾಡಲು ಬಿಡಿ. ನಮ್ಮ ಸರ್ಕಾರ ಉತ್ತಮವಾಗಿಯೇ ಕಾರ್ಯ ಮಾಡುತ್ತಿದೆ’ ಎಂಬ ಪೋಷ್ಟರ್ಗಳನ್ನು ಅಲ್ಲಲ್ಲಿ ಅಂಟಿಸಿದೆ.
ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರು ಮೋದಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಎಎಪಿ ಸರ್ಕಾರದ ಭ್ರಷ್ಟಾಚಾರ ವಿರೋಧೀ ಹೋರಾಟವನ್ನು ದುರ್ಬಲಗೊಳಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂಬ ಆರೋಪವನ್ನೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಡಿದ್ದಾರೆ.
ಈಗಾಗಲೇ ಕೇಂದ್ರಕ್ಕೆ ಟಾಂಗ್ ನೀಡುವ ಹಲವಾರು ಟಿವಿ, ರೇಡಿಯೋ ಜಾಹಿರಾತುಗಳನ್ನು ಎಎಪಿ ಬಿಡುಗಡೆ ಮಾಡಿದೆ. ಇದೀಗ ಪೋಸ್ಟರ್ ವಾರ್ ಆರಂಭಿಸಿದೆ. ಒಟ್ಟಿನಲ್ಲಿ ದೆಹಲಿಯಲ್ಲಿ ಎಎಪಿ ಸರ್ಕಾರ ನಡೆಸುತ್ತಿದೆಯೇ ಅಥವಾ ಕೇಂದ್ರ ವಿರೋಧಿ ಚಟುವಟಿಕೆ ನಡೆಸುತ್ತಿದೆಯೇ ಎಂಬ ಅನುಮಾನ ಜನರನ್ನು ಕಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.