ರಾಂಚಿ: ಜಾರ್ಖಂಡ್ನ ಪಶ್ಚಿಮ ಸಿಂಗ್ ಭೂಂ ಪ್ರದೇಶದ ಮನ್ಮಾರೋ ತೆಬೋ ಎಂಬಲ್ಲಿ ಕೇಂದ್ರ ಮೀಸಲು ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ನಕ್ಸಲರ ವಧೆಯಾಗಿದೆ. ಇಬ್ಬರು ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗುರುವಾರ ಬೆಳ್ಳಂಬೆಳಗ್ಗೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮಹಿಳೆ ಸೇರಿ ಮೂವರು ಮಾವೋವಾದಿಗಳ ಸಂಹಾರವಾಗಿದೆ. ನಕ್ಸಲರು ಬೀಡು ಬಿಟ್ಟಿರುವ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಈ ವೇಳೆ ನಡೆಸಿದ ಗುಂಡಿನ ದಾಳಿಯಲ್ಲಿ ಈ ಘಟನೆ ಸಂಭವಿಸಿದೆ ಎಂಬುದಾಗಿ ತಿಳಿದು ಬಂದಿದೆ.
ಘಟನಾ ಸ್ಥಳದಲ್ಲಿ AK,-47 ಸೇರಿದಂತೆ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಲಭ್ಯವಾಗಿದ್ದು, ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದ ಪೊಲೀಸ್ ಪಡೆ ಮತ್ತು ಸಿಆರ್ಪಿಎಫ್ನ 60 ನೇ ಬೆಟಾಲಿಯನ್ಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಎನ್ಕೌಂಟರ್ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.