ಶ್ರೀನಗರ: ಹೊಸದಾಗಿ ರಚನೆಗೊಂಡಿರುವ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ವಿವಿಧ ಕಡೆಗಳಲ್ಲಿ ಖಾಲಿ ಇರುವ ಸುಮಾರು 10,000 ಹುದ್ದೆಗಳನ್ನು ಸರಕಾರ ಗುರುತಿಸಿದೆ. ಎಲ್ಲಾ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ತೀರ್ಮಾನಿಸಿದೆ ಎಂದು ವರದಿಗಳು ತಿಳಿಸಿವೆ.
ಈ ಬಗ್ಗೆ ಮಾಹಿತಿಯನ್ನು ನೀಡಿರುವ ಜಮ್ಮು ಮತ್ತು ಕಾಶ್ಮೀರದ ಪ್ರಧಾನಕಾರ್ಯದರ್ಶಿ ರೋಹಿತ್ ಕನ್ಸಲ್ ಅವರು, “ವಿವಿಧ ಇಲಾಖೆಗಳಲ್ಲಿ ಸುಮಾರು 10 ಸಾವಿರ ಹುದ್ದೆಗಳು ಖಾಲಿ ಇರುವುದನ್ನು ಸರಕಾರ ಮಾಡಿದೆ ಮತ್ತು ಅವುಗಳ ನೇಮಕಾತಿ ಪ್ರಕ್ರಿಯೆಗಳ ಮೂಲಕ ಭರ್ತಿ ಮಾಡಲು ನಿರ್ಧರಿಸಿದೆ. ಒಂದೇ ಹಂತದಲ್ಲಿ ನೇಮಕಾತಿ ನಡೆಯುವ ಸಾಧ್ಯತೆ ಇದೆ. ಇದು ಕೇಂದ್ರಾಡಳಿತ ಪ್ರದೇಶದಲ್ಲಿ ಸರ್ಕಾರಿ ಸೇವೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಉತ್ತಮ ಸುದ್ದಿಯಾಗಿದೆ” ಎಂದಿದ್ದಾರೆ.
ಕೇಂದ್ರಾಡಳಿತ ಪ್ರದೇಶದಲ್ಲಿ ವರ್ಗ ನಾಲ್ಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆಡಳಿತ ಮಂಡಳಿ ಸಮರ್ಥ ಮತ್ತು ಸರಳವಾದ ಪ್ರಕ್ರಿಯೆಯನ್ನು ತರಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
“ಆಡಳಿತ ಮಂಡಳಿಯು ಸರಳ ಮತ್ತು ಪಾರದರ್ಶಕ ನಿಯಮಗಳನ್ನು “ಜಮ್ಮು ಮತ್ತು ಕಾಶ್ಮೀರ ನೇಮಕಾತಿಗೆ ವರ್ಗ ನಾಲ್ಕರ ವಿಶೇಷ ನೇಮಕಾತಿ ನಿಯಮ 2020” ಎಂಬ ಹೆಸರನ್ನು ಇಟ್ಟಿದೆ.
ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸುವಾಗ ಮೂಲ ನಿವಾಸಿಗಳು ಸರ್ಟಿಫಿಕೇಟ್ ಕಡ್ಡಾಯವಲ್ಲ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ವರ್ಗ 4ರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನೇಮಕಾತಿ ಪ್ರಕ್ರಿಯೆಗೆ ಆರಂಭ ನೀಡಲಾಗುವುದು. ಈ ಪ್ರಕ್ರಿಯೆ ಆದಷ್ಟು ಬೇಗ ಆರಂಭವಾಗಲಿದೆ ಎಂದು ಕನ್ಸಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.