News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೋದಿ-ಶಾ ಮಾತುಕತೆ : ಲಾಕ್­ಡೌನ್ ಬಗೆಗಿನ ನಿರ್ಧಾರ ಶೀಘ್ರ ಹೊರ ಬೀಳುವ ಸಾಧ್ಯತೆ

ನವದೆಹಲಿ: ಕೊರೋನಾವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿಯಾಗಿ ಹೇರಲಾಗಿರುವ 4ನೇ‌ ಹಂತದ ಲಾಕ್ ಡೌನ್ ಭಾನುವಾರ ಅಂತ್ಯವಾಗಲಿದೆ. ಮುಂದೆ ಯಾವ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ‌ ಎಂಬ ಬಗ್ಗೆ ನಾಳೆ ಮಾಹಿತಿ ಹೊರಬೀಳುವ ನಿರೀಕ್ಷೆ ಇದೆ.

ವರದಿಗಳ ಪ್ರಕಾರ, ಲಾಕ್ ಡೌನ್ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ನಡುವೆ ಇಂದು ಮಾತುಕತೆ ನಡೆದಿದೆ. ಮುಂದೆ ತೆಗೆದುಕೊಳ್ಳಬೇಕಾದ ನಿರ್ಧಾರಗಳು ಬಗ್ಗೆ‌ ಉಭಯ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಭಾರತದಲ್ಲಿ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರುತ್ತಲೇ ‌ಇದೆ.‌ ಆದರೆ ಲಾಕ್­ಡೌನ್ ಅನ್ನು ಮುಂದುವರೆಸುವ ಪರಿಸ್ಥಿತಿಯಲ್ಲೂ ಸರ್ಕಾರ ಇಲ್ಲ. ಹೀಗಾಗಿ ಚಾಣಾಕ್ಷ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ.

ಇಂದು ಅಮಿತ್ ಶಾ ಅವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚುವಲ್ ಸಭೆ‌‌ ನಡೆಸಿ, ಲಾಕ್­ಡೌನ್ ಬಗ್ಗೆ ಅವರು ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ.

ಕೆಲವು ರಾಜ್ಯಗಳು ಈಗಾಗಲೇ ಹಲವು ಸಡಿಲಿಕೆಗಳನ್ನು ನೀಡಿ, ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭ ಮಾಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top