ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ವನ್ಪೋರ ಪ್ರದೇಶದಲ್ಲಿ ಭದ್ರತಾಪಡೆಗಳು ಶನಿವಾರ ಇಬ್ಬರು ಭಯೋತ್ಪಾದಕರನ್ನು ಸಂಹಾರ ಮಾಡಿವೆ.
ಈ ಮಾಹಿತಿಯನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸ್ (ಕಾಶ್ಮೀರ ವಲಯ) ಇನ್ಸ್ಪೆಕ್ಟರ್ ಜನರಲ್ ವಿಜಯಕುಮಾರ್ ಅವರು ಖಚಿತಪಡಿಸಿದ್ದಾರೆ. ಕಾರ್ಯಾಚರಣೆ ಸಂದರ್ಭದಲ್ಲಿ ಇಬ್ಬರು ಉಗ್ರರನ್ನು ನೆಲಕ್ಕುರುಳಿಸಿದ್ದಾಗಿ ಹೇಳಿದ್ದಾರೆ.
ಇಬ್ಬರು ಭಯೋತ್ಪಾದಕರ ಗುರುತು ಪತ್ತೆ ಇನ್ನಷ್ಟೇ ಆಗಬೇಕಿದೆ. ಭಯೋತ್ಪಾದಕರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ ಜಮ್ಮು-ಕಾಶ್ಮೀರದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್ಪಿಎಫ್ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸಿದೆ.
ಪ್ರಸ್ತುತ ಪ್ರದೇಶದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಪ್ರದೇಶದಲ್ಲಿ ಇನ್ನು ಎರಡು-ಮೂರು ಉಗ್ರರು ಇರುವ ಬಗ್ಗೆ ಮಾಹಿತಿ ಇದೆ ಅದಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.