ನವದೆಹಲಿ: ಒರಿಸ್ಸಾ, ಸಿಕ್ಕಿಂ ಮತ್ತು ಮಿಜೋರಾಂ-ಈ ಮೂರು ರಾಜ್ಯಗಳನ್ನು ಈಗ ಒನ್ ನೇಷನ್ ಒನ್ ಕಾರ್ಡ್ ಯೋಜನೆಯಡಿ ‘ಇಂಟಿಗ್ರೇಟೆಡ್ ಮ್ಯಾನೇಜ್ಮೆಂಟ್ ಆಫ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಮ್’ (ಐಎಂ-ಪಿಡಿಎಸ್)ಗೆ ಸರ್ಕಾರ ಸೋಮವಾರ ಸೇರ್ಪಡೆಗೊಳಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಸ್ತುತ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಸಲುವಾಗಿ ಈ ಮೂರು ರಾಜ್ಯಗಳನ್ನು ಸೇರ್ಪಡೆಗೊಳಿಸಲಾಗಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ, “ಈ ವ್ಯವಸ್ಥೆಯಡಿಯಲ್ಲಿ, ಎನ್ಎಫ್ಎಸ್ಎ ಅಡಿಯಲ್ಲಿ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯ ಮೂಲಕ ಪ್ರಯೋಜನಗಳ ರಾಷ್ಟ್ರವ್ಯಾಪಿ ಪೋರ್ಟಬಿಲಿಟಿ ಜಾರಿಗೆ ತರಲಾಗಿದೆ. ಇದು ಎನ್ಎಫ್ಎಸ್ಎ ರೇಷನ್ ಕಾರ್ಡ್ ಬಳಕೆದಾರರಿಗೆ ePoS ಆಧಾರಿತ ಎಫ್ಪಿಎಸ್ಗಳಲ್ಲಿ ಆಧಾರ್ ದೃಢೀಕರಣದ ನಂತರ ಅಸ್ತಿತ್ವದಲ್ಲಿರುವ ಪಡಿತರ ಕಾರ್ಡ್ ಬಳಸಿ ಯಾವುದೇ ರಾಜ್ಯದಲ್ಲಿ ಎಲ್ಲಿಯಾದರೂ ತಮ್ಮ ಆಯ್ಕೆಯ ಎಫ್ಪಿಎಸ್ಯಲ್ಲಿ ಸಬ್ಸಿಡಿಯಲ್ಲಿ ತಮಗೆ ಸಿಗುವ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಬಹುದು” ಎಂದಿದ್ದಾರೆ.
ವಿಶೇಷವೆಂದರೆ, ಈ ಸೌಲಭ್ಯವನ್ನು ಇಲ್ಲಿಯವರೆಗೆ 17 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ವಿಸ್ತರಿಸಲಾಗಿದೆ. ಅವುಗಳೆಂದರೆ – ಆಂಧ್ರಪ್ರದೇಶ, ಬಿಹಾರ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ಮತ್ತು ಡಿಯು, ಗೋವಾ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಾರ್ಖಂಡ್, ಕೇರಳ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ , ರಾಜಸ್ಥಾನ, ಪಂಜಾಬ್, ತೆಲಂಗಾಣ, ತ್ರಿಪುರ ಮತ್ತು ಉತ್ತರ ಪ್ರದೇಶ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.