ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಆವಂತಿಪೋರಾದ ಟ್ರಾವೆಲ್ ಪ್ರದೇಶದ ಸೈಮೋಹದಲ್ಲಿ ಮಂಗಳವಾರ ಭದ್ರತಾ ಪಡೆಗಳು ಎನ್ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಸಂಹಾರ ಮಾಡಿವೆ.
ಉನ್ನತ ಭದ್ರತಾ ಅಧಿಕಾರಿಗಳು ಹೇಳುವಂತೆ, ಮೃತಪಟ್ಟ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಗ್ರೆನೇಡ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಗ್ರರ ಗುರುತು ಪತ್ತೆಯಾಗಿಲ್ಲ, ಆದರೆ ಸ್ಥಳಿಯರೇ ಆಗಿರಬಹುದು ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳಿಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
ಸೋಮವಾರ ರಾತ್ರಿಯಿಂದ ಆವಂತಿಪೋರ ಪೊಲೀಸರು, ಸೇನೆಯ 42 ರಾಷ್ಟ್ರೀಯ ರೈಫಲ್ಸ್, ಸಿಆರ್ಪಿಎಫ್ಗಳು ಉಗ್ರರು ನೆಲೆಸಿರುವ ಖಚಿತ ಮಾಹಿತಿಯನ್ನು ಆಧರಿಸಿ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿವೆ.
ಉಗ್ರರು ಇದ್ದ ಶಂಕಿತ ಪ್ರದೇಶಕ್ಕೆ ತೆರಳಿದಾಗ ಭದ್ರತಾ ಪಡೆಗಳ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದರು.ಈ ಸಂದರ್ಭದಲ್ಲಿ ಭದ್ರತಾ ಪಡೆಗಳು ಉಗ್ರರಿಗೆ ಶರಣಾಗುವಂತೆ ಸೂಚನೆ ನೀಡಿದವು, ಇದನ್ನು ಉಗ್ರರು ಕಿವಿಗೆ ಹಾಕಿಕೊಳ್ಳದ ಕಾರಣ ಎನ್ಕೌಂಟರ್ ನಡೆಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.