ನವದೆಹಲಿ: ಕೊರೋನವೈರಸ್ ಸಾಂಕ್ರಾಮಿಕ ರೋಗ ಭಾರತದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ವೈರಸ್ಗೆ ಇದುವರೆಗೆ ಸುಮಾರು 5598 ಮಂದಿ ಸಾವನ್ನಪ್ಪಿದ್ದಾರೆ. ಆದರೆ ಸಾವನ್ನಪ್ಪಿದ್ದು ಸುಮಾರು 73 ಶೇಕಡ ಮಂದಿ ಬೇರೆ ಕಾಯಿಲೆಗಳನ್ನು ಹೊಂದಿದವರು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕೊರೋನವೈರಸ್ ಸಾಂಕ್ರಾಮಿಕ ರೋಗಕ್ಕೆ ಬಲಿಯಾದ ಶೇಕಡ 73ರಷ್ಟು ಮಂದಿ ಡಯಾಬಿಟಿಸ್, ಹೈಪರ್ಟೆನ್ಶನ್, ಹೃದ್ರೋಗ ಮತ್ತು ಉಸಿರಾಟದ ತೊಂದರೆಯಂತಹ ಕಾಯಿಲೆಗಳನ್ನು ಹೊಂದಿದವರು ಎಂದು ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ.
ಭಾರತದಲ್ಲಿ ಕೊರೋನವೈರಸ್ ರೋಗಿಗಳ ಚೇತರಿಕೆ ದರವು ಹೆಚ್ಚಿನ ಪ್ರಮಾಣದಲ್ಲಿ ಇದೆ. ಇದುವರೆಗೆ ಸುಮಾರು 95,527 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,708 ಮಂದಿ ಗುಣಮುಖರಾಗಿದ್ದಾರೆ.
ಪ್ರಸ್ತುತ ಭಾರತದ ಚೇತರಿಕೆ ದರವು 48.07% ಇದೆ. ಏಪ್ರಿಲ್ 15ರಿಂದ ಇದು 11.42% ಹೆಚ್ಚಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಮಂಗಳವಾರ 8,171 ಪ್ರಕರಣಗಳು ಭಾರತದಲ್ಲಿ ಪತ್ತೆಯಾಗಿದೆ. ಹೀಗಾಗಿ ಭಾರತದ ಒಟ್ಟು ಕೊರೋನವೈರಸ್ ಪ್ರಕರಣಗಳ ಸಂಖ್ಯೆ 1.98 ಲಕ್ಷಕ್ಕೆ ಏರಿಕೆಯಾಗಿದೆ. ಇದರಲ್ಲಿ 97,581 ಸಕ್ರಿಯ ಪ್ರಕರಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.