ಬೆಂಗಳೂರು: ಕೊರೋನಾ ಮಹಾಮಾರಿಯ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ತಮ್ಮ ಕಛೇರಿಗೆ ಸಲ್ಲಿಸುವ ಕಡತಗಳನ್ನು ಇ- ಆಫೀಸ್ ಮೂಲಕ ಸಲ್ಲಿಕೆ ಮಾಡುವಂತೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಭೌತಿಕ ವ್ಯವಹಾರಗಳು ಸೋಂಕು ಹರಡುವ ಸಾಧ್ಯತೆ ಇದ್ದು, ಆ ಅವಕಾಶವನ್ನು ತಪ್ಪಿಸುವ ಸಲುವಾಗಿ ಮುಖ್ಯಮಂತ್ರಿ ಈ ಕ್ರಮ ತೆಗೆದುಕೊಂಡಿದ್ದಾರೆ. ಅಲ್ಲದೆ, ಈಗಾಗಲೇ ಜೂನ್ 1 ರಿಂದಲೇ ತೊಡಗಿದಂತೆ ಎಲ್ಲಾ ಸಚಿವರುಗಳ ಕಛೇರಿಯಲ್ಲಿಯೂ ಇ – ಆಫೀಸ್ ಬಳಸುವ ಮತ್ತು ಅದರ ಮೂಲಕವೇ ಕಾಗದ ಪತ್ರಗಳ ವಹಿವಾಟುಗಳನ್ನು ನಡೆಸುವಂತೆಯೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಸೂಚನೆ ನೀಡಲಾಗಿತ್ತು.
ರಾಜ್ಯದ ಎಲ್ಲಾ ಮುಖ್ಯ ಇಲಾಖೆಗಳು, ಅಧೀನ ಕಛೇರಿಗಳು, ಜಿ. ಪಂ. ಕಛೇರಿ, ಪೊಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಹೀಗೆ ಎಲ್ಲಾ ಸರ್ಕಾರಿ ಸಂಬಂಧಿತ ಕಛೇರಿಗಳಲ್ಲಿಯೂ ಇ- ಆಫೀಸ್ ಬಳಸಿಕೊಂಡು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.