ವಾಷಿಂಗ್ಟನ್ : ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅತಿಯಾದ ರೋಗ ನಿರೋಧಕ ಔಷಧ (ಆ್ಯಂಟಿ ಬಯೋಟಿಕ್) ಗಳನ್ನು ನೀಡುವುದರಿಂದ ರೋಗಿಗಳ ಜೀವಕ್ಕೆ ಅಪಾಯ ಬಂದೊದಗುವ ಸಂಭವ ಹೆಚ್ಚು ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ ಎಂದು ವರದಿಗಳು ಹೇಳಿವೆ.
ಈ ಬಗ್ಗೆ ಮಾಹಿತಿ ನೀಡಿರುವ ಸಂಸ್ಥೆಯ ನಿರ್ದೇಶಕ ಟೆಡ್ರೋಸ್ ಅಧನೋಂ ಗೆಬ್ರಿಯೇಸಸ್, ಪ್ರಸ್ತುತ ಕೊರೋನಾ ಸೋಂಕಿಗೆ ಯಾವುದೇ ಔಷಧ ಇಲ್ಲ. ಆದರೆ ಸೋಂಕಿತರ ಚಿಕಿತ್ಸೆಯ ಸಂದರ್ಭದಲ್ಲಿ ಅವರಿಗೆ ಹೆಚ್ಚಿನ ಪ್ರಮಾಣದಲ್ಲಿ ಆ್ಯಂಟಿ ಬಯೋಟೆಕ್ ನೀಡುವ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಆದರೆ ಇದು ಅಪಾಯಕಾರಿ ನಡೆಯಾಗಿದ್ದು, ಇದರಿಂದ ಜೀವ ಹಾನಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕಿತರಿಗೆ ನೀಡುವ ಚಿಕಿತ್ಸಾ ಕ್ರಮದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಸರ್ವೇ ನಡೆಸಿದ್ದು, ಈ ಸಂದರ್ಭದಲ್ಲಿ ರೋಗಿಗಳಿಗೆ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸುವ ಆ್ಯಂಟಿ ಬಯಾಟಿಕ್ಗಳನ್ನು ವಿಪರೀತ ಪ್ರಮಾಣದಲ್ಲಿ ನೀಡುವುದು ತಿಳಿದು ಬಂದಿದೆ. ಇದು ರೋಗಿಗಳನ್ನು ಸಾವಿನ ದವಡೆಗೆ ದೂಡುವ ಸಾಧ್ಯತೆ ಇದೆ ಎಂದೂ ಅವರು ತಿಳಿಸಿದ್ದಾರೆ. ಜೊತೆಗೆ ಸೋಂಕಿತರಲ್ಲಿ ಕೆಲವರು ಇತರ ಕಾಯಿಲೆಗಳಾದ ಹೃದಯ ಸಂಬಂಧಿ ಸಮಸ್ಯೆ, ಕ್ಯಾನ್ಸರ್, ಶುಗರ್ ಮೊದಲಾದವುಗಳಿಗೂ ಚಿಕಿತ್ಸೆ ಪಡೆಯುವವರಾಗಿದ್ದಾರೆ ಎಂದೂ ಈ ಸರ್ವೆಯ ವರದಿ ತಿಳಿಸಿದೆ. ಹೀಗೆ ಸಮಸ್ಯೆಗಹಿರುವ ರೋಗಿಗಳಿಗೆ ಆ್ಯಂಟಿ ಬಯೋಟಿಕ್ನ ಅಧಿಕ ಬಳಕೆಯಿಂದ ಹಾನಿಕಾರಕ ಪರಿಣಾಮಗಳಾಗುವ ಸಾಧ್ಯತೆ ಇದ್ದು, ಅದನ್ನು ನಿಯಂತ್ರಿಸುವಂತೆ, ಪರ್ಯಾಯ ಕ್ರಮಗಳನ್ನು ಅನುಸರಿಸುವಂತೆಯೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.