ವಾಷಿಂಗ್ಟನ್: ಅಮೆರಿಕಾದಲ್ಲಿ ಆಘಾತಕಾರಿ ಬೆಳವಣಿಗೆಯೊಂದು ನಡೆದಿದ್ದು, ವಾಷಿಂಗ್ಟನ್ ಡಿಸಿಯಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಮುಂಭಾಗದಲ್ಲಿ ಸ್ಥಾಪಿಸಲಾಗಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಬ್ಲ್ಯಾಕ್ ಲೈವ್ಸ್ ಮ್ಯಾಟರ್ಸ್ ಪ್ರತಿಭಟನಾಕಾರರು ಅಪವಿತ್ರಗೊಳಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಪ್ರತಿಮೆಯನ್ನು ಅಪವಿತ್ರಗೊಳಿಸಿದ ಬಗ್ಗೆ ಯುನೈಟೆಡ್ ಸ್ಟೇಟ್ಸ್ ಪಾರ್ಕ್ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಿನ್ನೇಸೋಟದ ಮಿನ್ನಿಯಾಪೋಲಿಸ್ನಲ್ಲಿ ಆಫ್ರಿಕನ್-ಅಮೆರಿಕನ್ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಹತ್ಯೆಯ ನಂತರ ಅಮೆರಿಕದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದವು. ಬಿಳಿಯ ಪೊಲೀಸ್ ಒಬ್ಬ ಫ್ಲಾಯ್ಡ್ ಅವರ ಕುತ್ತಿಗೆಗೆ ಮೊಣಕಾಲನ್ನು ಬಿಗಿಯಾಗಿ ಊರಿದ ಹಿನ್ನಲೆಯಲ್ಲಿ ಮೇ 25 ರಂದು ಅವರು ನಿಧನರಾದರು.
ಘಟನೆಯ ನಂತರ, ಪೊಲೀಸ್ ದೌರ್ಜನ್ಯ ಮತ್ತು ಜನಾಂಗೀಯ ಅನ್ಯಾಯದ ವಿರುದ್ಧ ಪ್ರತಿಭಟನಾಕಾರರು ಅಮೆರಿಕಾ ದೇಶಾದ್ಯಂತ ಬೀದಿಗಿಳಿದಿದ್ದಾರೆ. ಕೆಲವು ಪ್ರತಿಭಟನಾಕಾರರು ಹಿಂಸೆ ಮತ್ತು ಲೂಟಿಯನ್ನು ಸಹ ಮಾಡುತ್ತಿದ್ದಾರೆ.
ಈ ಪ್ರಕರಣದಲ್ಲಿ ಯುಎಸ್ ಪ್ರಾಸಿಕ್ಯೂಟರ್ಗಳು ಹಲವಾರು ಪೊಲೀಸ್ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಫ್ಲಾಯ್ಡ್ನ ಕುತ್ತಿಗೆಗೆ ಮೊಣಕಾಲು ಊರಿದ ಆರೋಪಿ ಡೆರೆಕ್ ಚೌವಿನ್ ವಿರುದ್ಧ ಎರಡನೇ ದರ್ಜೆಯ ಕೊಲೆ ಪ್ರಕರಣ ದಾಖಲಿಸಲಾಗಿದೆ.
ಘಟನಾ ಸ್ಥಳದಲ್ಲಿದ್ದ ಇತರ ಮೂವರು ಅಧಿಕಾರಿಗಳ ವಿರುದ್ಧ ಮೊದಲ ಬಾರಿಗೆ ಎರಡನೇ ದರ್ಜೆಯ ಕೊಲೆ ಮತ್ತು ಎರಡನೇ ದರ್ಜೆಯ ನರಹತ್ಯೆಗೆ ಸಹಾಯ ಮಾಡಿದ ಆರೋಪ ಹೋರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.