ನವದೆಹಲಿ: ತಬ್ಲೀಘಿ ಜಮಾತ್ನ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಕಾರಣ 960 ವಿದೇಶಿ ಪ್ರಜೆಗಳನ್ನು ಭಾರತಕ್ಕೆ ಆಗಮಿಸುವುದಕ್ಕೆ ನಿರ್ಬಂಧವನ್ನು ವಿಧಿಸಲಾಗಿದೆ. ಈ ನಾಗರಿಕರನ್ನು 10 ವರ್ಷಗಳ ಕಾಲ ನಿಷೇಧಿಸಲಾಗಿ ಎಂದು ಸರ್ಕಾರಿ ಮೂಲಗಳು ಮಾಹಿತಿ ನೀಡಿವೆ.
ಕೇಂದ್ರ ಸರ್ಕಾರದ ಮೂಲಗಳ ಪ್ರಕಾರ, ಈ ವಿದೇಶಿ ಪ್ರಜೆಗಳನ್ನು ಈಗಾಗಲೇ ಕಪ್ಪುಪಟ್ಟಿಗೆ ಸೇರಿಸಲಾಗಿತ್ತು.
ಈ ಹಿಂದೆ ದೆಹಲಿ ಪೊಲೀಸರು ಈ ವಿದೇಶಿ ಪ್ರಜೆಗಳ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ್ದರು. ದೆಹಲಿ ಅಪರಾಧ ಶಾಖೆಯ ಪ್ರಕಾರ, ಈ ಎಲ್ಲಾ ಆರೋಪಿಗಳು ವೀಸಾ ಕಾನೂನನ್ನು ಉಲ್ಲಂಘಿಸಿದ್ದಾರೆ. ಹೀಗಾಗಿ, ಈ ಎಲ್ಲಾ ಆರೋಪಿಗಳ ವೀಸಾಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರ ಅವರನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಸೇರಿದಂತೆ ವಿವಿಧ ಗಂಭೀರ ಆರೋಪಗಳನ್ನು ಇವರ ಮೇಲೆ ದಾಖಲಿಸಲಾಗಿದೆ.
ಕೊರೋನಾವೈರಸ್ ಸೋಂಕಿನ ನಡುವೆಯೇ, ದೆಹಲಿಯ ನಿಜಾಮುದ್ದೀನ್ನಲ್ಲಿ ತಬ್ಲಿಗಿ ಜಮಾತ್ನ ಹೆಚ್ಚಿನ ಜನರನ್ನು ಒಟ್ಟುಗೂಡಿಸಿ ಸಮಾವೇಶ ನಡೆಸಲಾಗಿತ್ತು. ಇದರ ಕಾರಣದಿಂದಾಗಿ ಕರೋನಾವೈರಸ್ ದೊಡ್ಡ ಮಟ್ಟದಲ್ಲಿ ಹರಡಿತು. ಕೇಂದ್ರ ಗೃಹ ಸಚಿವಾಲಯವು ಏಪ್ರಿಲ್ನಲ್ಲಿ ತಬ್ಲಿಘಿ ಜಮಾತ್ನ 960 ವಿದೇಶಿ ಪ್ರಜೆಗಳನ್ನು ಕಪ್ಪುಪಟ್ಟಿಗೆ ಸೇರಿಸಿದೆ. ಅಲ್ಲದೆ, ಅವರ ವೀಸಾವನ್ನು ರದ್ದುಪಡಿಸಿದೆ.
ಇನ್ನಿತರ ಪ್ರದೇಶಗಳಲ್ಲಿ ಅಕ್ರಮಾವಿ ವಾಸಿಸುತ್ತಿರುವ ವಿದೇಶಿ ಪ್ರಜೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ವಿದೇಶಿ ನಾಗರಿಕರ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಗೃಹ ಸಚಿವಾಲಯ ದೆಹಲಿ ಪೊಲೀಸ್ ಮತ್ತು ಇತರ ರಾಜ್ಯಗಳ ಪೊಲೀಸರಿಗೆ ಸೂಚಿಸಿತ್ತು.
960 blacklisted foreign nationals banned for 10 years from travelling to India for their involvement in Tablighi Jamaat activities: Government sources pic.twitter.com/W5X6e6TU4y
— ANI (@ANI) June 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.