ಬೆಂಗಳೂರು: ಸರ್ಕಾರಿ ನೌಕರರು, ವಾಹನಗಳು, ಟ್ರ್ಯಾಕ್ಟರ್ ಇತ್ಯಾದಿಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಅದನ್ನು ಕೂಡಲೇ ರದ್ದುಪಡಿಸಿಕೊಳ್ಳಬೇಕು. ನಕಲಿ ಕಾರ್ಡ್, ಅನರ್ಹವಾಗಿರುವಂತಹ ಪಡಿತರ ಚೀಟಿ ಹೊಂದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಎಚ್ಚರಿಕೆ ನೀಡಿದ್ದಾರೆ.
ತಮ್ಮ ಗೃಹಕಛೇರಿ ಕೃಷ್ಣಾದಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಬಡವರಿಗಾಗಿ ನೀಡಲಾಗುವ ಸೌಲಭ್ಯಗಳನ್ನು ಅವರಿಗೆ ಸರಿಯಾದ ರೀತಿಯಲ್ಲಿ, ಸಮರ್ಪಕವಾಗಿ ದೊರೆಯುವಂತೆ ಮಾಡಬೇಕು. ಇದಕ್ಕಾಗಿ ಅಧಿಕಾರಿಗಳು ಪೂರಕ ಕ್ರಮಗಳನ್ನು ಕೈಗೊಳ್ಳಬೇಕು ಎಂದೂ ಅವರು ತಿಳಿಸಿದ್ದಾರೆ. ಅಲ್ಲದೆ ಬಡವರಿಗಾಗಿ ಇರುವ ಸೌಲಭ್ಯಗಳನ್ನು ಅನರ್ಹರು ದುರುಪಯೋಗ ಮಾಡಿಕೊಳ್ಳುವ ಬಗ್ಗೆಯೂ ಮಾಹಿತಿ ಬರುತ್ತಿದ್ದು, ಅದನ್ನು ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವತ್ತಲೂ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ಗೆ ರಾಜ್ಯದ ಬಡಜನರು ಕಷ್ಟ ಪಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಬಡವರ ಹಸಿವು ನೀಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು 95% ದಷ್ಟು ಪಡಿತರ ಚೀಟಿ ಹೊಂದಿದವರಿಗೆ ದಿನಸಿ ಒದಗಿಸಿದೆ. ಆದರೂ ಇದರಲ್ಲಿ ಅಕ್ರಮದ ವಾಸನೆ ಬಂದಿದ್ದು, ಮತ್ತೆ ಅನರ್ಹರಿಂದ ಕಾರ್ಡುಗಳನ್ನು ರದ್ದುಪಡಿಸುವ ಮೂಲಕ ಬಡವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಜೊತೆಗೆ ಮುಖ್ಯಮಂತ್ರಿ ಅನಿಲ ಯೋಜನೆಯಡಿಯಲ್ಲಿ ಕೊರೋನಾ ಸಂಕಷ್ಟದಿಂದ ಬಳಲುತ್ತಿರುವ 98,079 ಫಲಾನುಭವಿಗಳಿಗೆ ತಲಾ ಮೂರರಂತೆ ಗ್ಯಾಸ್ ಸಿಲಿಂಡರ್ಗಳನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದೂ ಮುಖ್ಯಮಂತ್ರಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.