ಬೆಂಗಳೂರು: ಮುಂದಿನ ಎರಡು ತಿಂಗಳುಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೀರಿನ ಅಭಾವ ಎದುರಾಗುವ ಸಾಧ್ಯತೆ ಇದ್ದು, ಜನರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಿಎಂ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಆದೇಶವನ್ನು ನೀಡಿದ್ದಾರೆ
ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆಯನ್ನು ನೀಡಿದ್ದಾರೆ.
ನೀರಿನ ಸಮಸ್ಯೆಯನ್ನು ಸಾಮಾನ್ಯ ಸಮಸ್ಯೆ ಎಂದು ಭಾವಿಸದೆ ಗಂಭೀರವಾಗಿ ಪರಿಗಣಿಸಬೇಕು. ಅಲ್ಲದೆ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಮೂಲಕ ಜನರ ನೀರಿನ ಬವಣೆ ನೀಗಿಸಲು ಪ್ರಯತ್ನ ಮಾಡಬೇಕು ಎಂಬುದಾಗಿಯೂ ಅವರು ಸೂಚಿಸಿದ್ದಾರೆ. ಅಲ್ಲದೆ ಕೇಂದ್ರ ಸರ್ಕಾರದ ಅಮೃತ್ ಯೋಜನೆಯ ರಾಜ್ಯದ ಮೊತ್ತವನ್ನು ಬಿಡುಗಡೆ ಮಾಡುವಂತೆಯೂ ಮನವಿ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳ ಬಳಿ 47.24 ಕೋಟಿ ರೂ. ಗಳ ಲಭ್ಯತೆ ಇರುವುದಾಗಿಯೂ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಸಚಿವರಾದ ಬಿ. ಎ. ಬಸವರಾಜು, ಕೆ.ಪಿ. ನಾರಾಯಣ ಗೌಡ, ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.