ಬೆಂಗಳೂರು: ಕೊರೋನಾ ಸಂಕಷ್ಟದಿಂದಾಗಿ ಖಾಸಗಿ ವಿದ್ಯಾಸಂಸ್ಥೆಗಳು ಸಮಸ್ಯೆ ಎದುರಿಸುವಂತಾಗಿದೆ. ಹೀಗೆ ಸಂಕಷ್ಟದಿಂದ ಬಳಲುತ್ತಿರುವ ಖಾಸಗಿ ವಿದ್ಯಾಸಂಸ್ಥೆಗಳಿಗೆ ನೆರವು ನೀಡುವ ಸಲುವಾಗಿ ರಾಜ್ಯ ಸರ್ಕಾರ ಆರ್ಟಿಇ (ಶಿಕ್ಷಣ ಹಕ್ಕು ಕಾಯ್ದೆ) ಶುಲ್ಕವಾಗಿ 275 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ಆರ್ಟಿಇ ಕಾಯ್ದೆಯಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಯಾಗಿ ರಾಜ್ಯ ಸರ್ಕಾರ ಈ ನೆರವನ್ನು ಬಿಡುಗಡೆ ಮಾಡಿದೆ. ಇದನ್ನು ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಹಿತವನ್ನು ಕಾಪಾಡುವಂತೆಯೂ ರಾಜ್ಯ ಸರ್ಕಾರ ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ.
ಈ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ 550 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಸದ್ಯ ಕೊರೋನಾ ಸಂಕಷ್ಟದಿಂದ ಸಮಸ್ಯೆಯಾಗಿರುವ ಹಿನ್ನಲೆಯಲ್ಲಿ ಈ ಅನುದಾನದ ಅರ್ಧ ಭಾಗ ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಹಣವನ್ನು ಉಪಯೋಗಿಸಿ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಮಾಡುವಂತೆಯೂ ಸೂಚಿಸಲಾಗಿದೆ.
ಇದರ ಜೊತೆಗೆ ಅನುದಾನಿತ ಪ.ಪೂ. ಕಾಲೇಜುಗಳ ಮೇ, ಜೂನ್, ಜುಲೈ ತಿಂಗಳ ವೇತನದ ಅನುಕೂಲಕ್ಕಾಗಿ 143.37 ಕೋಟಿ ರೂ. ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.